alex Certify
ಕನ್ನಡ ದುನಿಯಾ       Mobile App
       

Kannada Duniya

ಕುಬೇರನನ್ನೂ ಮೀರಿಸುವಂತಿದ್ದಾನೆ ಈ ಭ್ರಷ್ಟ ಅಧಿಕಾರಿ

ನವದೆಹಲಿ: ನೋಯ್ಡಾದ ಮಾಜಿ ಮುಖ್ಯ ಇಂಜಿನಿಯರ್ ಬಳಿ ಬರೋಬ್ಬರಿ 25.8 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ.

ಜಾರಿ ನಿರ್ದೇಶನಾಲಯ ನಡೆಸಿದ ತನಿಖೆಯಲ್ಲಿ ಈ ಅಧಿಕಾರಿ ಅಕ್ರಮ ಆಸ್ತಿ ಸಂಪಾದಿಸಿರುವುದು ಗೊತ್ತಾಗಿದ್ದು, ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ನೋಯ್ಡಾದಲ್ಲಿ ಮುಖ್ಯ ಕಾರ್ಯನಿರ್ವಾಹಕರಾಗಿದ್ದ ಯಾದವ್ ಸಿಂಗ್ ಕುಟುಂಬದವರ ಹೆಸರಲ್ಲಿ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆ. ನಕಲಿ ಕಂಪನಿಗಳು ಸೇರಿದಂತೆ ವಿವಿಧೆಡೆ ಹೂಡಿಕೆ ಮಾಡಿದ್ದಾರೆ. ಕೆಲಸದಲ್ಲಿದ್ದ ಸಂದರ್ಭದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಅವರು ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ.

ಮನಿ ಲಾಂಡರಿಂಗ್ ಪ್ರಕರಣದಡಿ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...