alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ನೌಕರರಿಗೊಂದು ಸಿಹಿಸುದ್ದಿ

Rupee

ನವದೆಹಲಿ: ವೇತನ, ಭತ್ಯೆ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಗುರುವಾರ ಮುಷ್ಕರ ನಡೆಸಿದ್ದಾರೆ. ಕೇಂದ್ರ ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಬೇಕೆಂದು ರಾಜ್ಯ ಸರ್ಕಾರಿ ನೌಕರರು ಯಶಸ್ವಿಯಾಗಿ ಮುಷ್ಕರ ನಡೆಸಿದ್ದಾರೆ.

ಇದೆಲ್ಲಾ ಇರಲಿ, ಕೇಂದ್ರ ಸರ್ಕಾರಿ ನೌಕರರಿಗೆ ಶುಭಸುದ್ದಿಯೊಂದು ಇಲ್ಲಿದೆ. ನೌಕರ ವಲಯದಲ್ಲಿ ನಿರೀಕ್ಷೆಯಲ್ಲಿದ್ದಂತೆ ಕೇಂದ್ರ ಸರ್ಕಾರ 7ನೇ ವೇತನ ಆಯೋಗವನ್ನು ಜಾರಿಗೊಳಿಸಿದ್ದು, ಜುಲೈ 1ರಿಂದಲೇ ಎಲ್ಲಾ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಹೆಚ್ಚಳವಾಗಲಿದೆ. ಹಿಂದಿನ ಸರ್ಕಾರ ವೇತನ ಆಯೋಗ ರಚಿಸಿದ್ದು, ಈ ಸರ್ಕಾರ ದೀರ್ಘ ಅವಧಿಯ ಬಳಿಕ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ತಂದಿದೆ ಎನ್ನಲಾಗಿದೆ.

47 ಲಕ್ಷ ಸರ್ಕಾರಿ ನೌಕರರು, 52 ಲಕ್ಷ ಪಿಂಚಣಿದಾರರು ವೇತನ ಹೆಚ್ಚಳದ ಪ್ರಯೋಜನ ಪಡೆಯಲಿದ್ದಾರೆ. ಇದರಿಂದಾಗಿ ವಾರ್ಷಿಕ 1.02 ಲಕ್ಷ ಕೋಟಿ ರೂ. ಹೊರೆಯಾಗಲಿದೆ ಎಂದು ಸಂಪುಟ ಕಾರ್ಯದರ್ಶಿ ಪಿ.ಕೆ.ಸಿನ್ಹಾ ತಿಳಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...