alex Certify
ಕನ್ನಡ ದುನಿಯಾ       Mobile App
       

Kannada Duniya

ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದಳು ಮಹಿಳೆ…!

ಜಾರ್ಖಂಡ್‌ : ಹಾವು ಕಚ್ಚಿದರೆ, ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯುವುದು ಸಾಮಾನ್ಯ. ಆದರೆ ಇಲ್ಲಿ ಹಾವು ಕಚ್ಚಿದ ಮಹಿಳೆಯ ಜೊತೆಗೆ ಹಾವನ್ನೂ ಹಿಡಿದು ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

34 ವರ್ಷದ ಮಹಿಳೆಗೆ ಹಾವು ಕಚ್ಚಿದ್ದು, ಚಿಕಿತ್ಸೆಗಾಗಿ ಜಾರ್ಖಂಡ್‌ ನ ಈ ಕುಟುಂಬದವರು ಬಂದಿದ್ದಾರೆ. ಈ ವೇಳೆ ಮಹಿಳೆಗೆ ಕಚ್ಚಿರುವ ಹಾವನ್ನೂ ಜೊತೆಗೆ ತೆಗೆದುಕೊಂಡು ಬಂದಿದ್ದಾರೆ.

ಮಹಿಳೆಗೆ ಚಿಕಿತ್ಸೆ ನೀಡಿದ ವೈದ್ಯರು ಯಾವುದೇ ಪ್ರಾಣಾಪಾಯ ಇಲ್ಲ ಎಂದು ಹೇಳಿದ ಬಳಿಕ, ಹಿಡಿದಿಟ್ಟಿದ್ದ ಹಾವನ್ನು ಸುರಕ್ಷಿತವಾಗಿ ಬಿಟ್ಟಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜಾರ್ಖಂಡ್‌ನ ಅನೇಕ ಭಾಗಗಳಿಂದ ಹಾವು ಕಚ್ಚಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಬುಧವಾರ 4 ಪ್ರಕರಣಗಳು ಆಸ್ಪತ್ರೆಯಲ್ಲಿ ದಾಖಲಾಗಿವೆ. ಹಾವು ಕಚ್ಚಿದ್ದಕ್ಕೆ ಪ್ರತ್ಯೇಕ ಔಷಧಿಗಳು ಲಭ್ಯವಿದ್ದರೂ, ಇದೇ ರೀತಿ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ, ಔಷಧಿ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂಬ ಆತಂಕವೂ ಎದುರಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...