alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರ ಪ್ರತಿಭಟನೆ ಎಫೆಕ್ಟ್: ದುಬಾರಿಯಾಯ್ತು ತರಕಾರಿ, ಹಣ್ಣು

ದೇಶದ 7 ರಾಜ್ಯಗಳಲ್ಲಿ ರೈತರ ಪ್ರತಿಭಟನೆ ಎರಡನೇ ದಿನವೂ ಮುಂದುವರೆದಿದೆ. ಮಧ್ಯಪ್ರದೇಶ, ರಾಜಸ್ತಾನ, ಹರ್ಯಾಣ, ಪಂಜಾಬ್ ಸೇರಿದಂತೆ 7 ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. 130 ಸಂಘಟನೆಗಳು ರೈತ ಸಂಘಟನೆ ಪ್ರತಿಭಟನೆಗೆ ಬೆಂಬಲ ನೀಡಿವೆ. ಶುಕ್ರವಾರದಂತೆ ಶನಿವಾರ ಕೂಡ ಅನೇಕ ಕಡೆ ರೈತರ ಪ್ರತಿಭಟನೆ ಬಿಸಿ ತಟ್ಟಿದೆ.

ಮೊದಲ ದಿನ ಉಗ್ರ ಪ್ರತಿಭಟನೆ ನಡೆಸಿದ್ದ ರೈತರು ರಸ್ತೆ ಮೇಲೆ ಹಾಲು, ತರಕಾರಿ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದರು. ರೈತರ ಪ್ರತಿಭಟನೆ ಜನಸಾಮಾನ್ಯರಿಗೆ ಬಿಸಿ ಮುಟ್ಟಿಸಿದೆ. ಮಾರುಕಟ್ಟೆಗೆ ಬರ್ತಿರುವ ತರಕಾರಿ, ಹಣ್ಣಿನ ಪ್ರಮಾಣ ಕಡಿಮೆಯಾಗಿದ್ದು ಬೆಲೆ ಏರಿಕೆಯಾಗಿದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.

ಬೆಳೆಗೆ ಬೆಂಬಲ ಬೆಲೆ ಘೋಷಣೆ, ಎಲ್ಲ ರೈತರ ಸಾಲ ಮನ್ನಾ ಹಾಗೂ ಸಣ್ಣ ರೈತ ಅಥವಾ ಬೇರೆಯವರ ಭೂಮಿಯಲ್ಲಿ ಬೆಳೆ ಬೆಳೆಯುವ ರೈತರಿಗೆ ಮಾಸಿಕ ವೇತನ ನಿಗದಿ ಸೇರಿದಂತೆ ಅನೇಕ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...