alex Certify
ಕನ್ನಡ ದುನಿಯಾ       Mobile App
       

Kannada Duniya

ಗುರು ಪೂರ್ಣಿಮೆಯಂದು ಸಿಎಂ ಮುಂದೆ ಮಂಡಿಯೂರಿದ ಪೊಲೀಸ್ ಅಧಿಕಾರಿ

ಗುರು ಪೂರ್ಣಿಮೆಯಂದು ಪೊಲೀಸ್ ಅಧಿಕಾರಿಯೊಬ್ಬರು ಸಮವಸ್ತ್ರದಲ್ಲಿಯೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮುಂದೆ ಮಂಡಿಯೂರಿ ಆಶೀರ್ವಾದ ಪಡೆದಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪರ-ವಿರೋಧಕ್ಕೆ ಕಾರಣವಾಗಿದೆ.

ಗೋರಕ್ಪುರ್ ನಗರದಲ್ಲಿ ಸರ್ಕಲ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪ್ರವೀಣ್ ಕುಮಾರ್ ಸಿಂಗ್, ಸಾರ್ವಜನಿಕರ ಸಮ್ಮುಖದಲ್ಲೇ ಗೋರಕನಾಥ ಮಠದ ಮುಖ್ಯಸ್ಥರೂ ಆಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮುಂದೆ ಮಂಡಿಯೂರಿ ನಮಸ್ಕರಿಸಿದ ಬಳಿಕ ಅವರ ಹಣೆಗೆ ತಿಲಕವಿಟ್ಟು ಹೂವಿನ ಹಾರ ಹಾಕಿ ಗೌರವಿಸಿದ್ದಾರೆ.

ಈ ಫೋಟೋಗಳನ್ನು ಪ್ರವೀಣ್ ಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದು, ಇದಾದ ಬಳಿಕ ಪರ-ವಿರೋಧದ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಪೊಲೀಸ್ ಅಧಿಕಾರಿಯೊಬ್ಬರು ಸಮವಸ್ತ್ರದಲ್ಲಿಯೇ ಈ ರೀತಿ ಮಾಡಿರುವುದು ಸರಿಯೇ ಎಂದು ಕೆಲವರು ಪ್ರಶ್ನಿಸಿದರೆ, ಮತ್ತೆ ಹಲವರು ಇದರಲ್ಲಿ ತಪ್ಪೇನಿದೆ ಎಂದು ಕೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...