alex Certify
ಕನ್ನಡ ದುನಿಯಾ       Mobile App
       

Kannada Duniya

ಜೇಟ್ಲಿ ಮೂತ್ರಪಿಂಡ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ

ಕೇಂದ್ರದ ವಿತ್ತ ಮಂತ್ರಿ ಅರುಣ್ ಜೇಟ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್)ನಲ್ಲಿ ಅರುಣ್ ಜೇಟ್ಲಿಗೆ ಶಸ್ತ್ರಚಿಕಿತ್ಸೆ ನಡೆದಿದೆ. ಮೂಲಗಳ ಪ್ರಕಾರ ಕೇಂದ್ರ ಸಚಿವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆಯಂತೆ.

ಅರುಣ್ ಜೇಟ್ಲಿ ಹಾಗೂ ಮೂತ್ರಪಿಂಡ ದಾನಿ ಇಬ್ಬರೂ ಸುರಕ್ಷಿತವಾಗಿದ್ದಾರೆಂದು ಮೂಲಗಳು ಹೇಳಿವೆ. ಅರುಣ್ ಜೇಟ್ಲಿ ಮೂತ್ರಪಿಂಡ ಸೋಂಕಿನಿಂದ ಬಳಲುತ್ತಿದ್ದರು. ಈ ವಿಷ್ಯವನ್ನು ಜೇಟ್ಲಿ ಟ್ವೀಟರ್ ನಲ್ಲಿ ತಿಳಿಸಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಜೇಟ್ಲಿ ಯುಕೆ  ಪ್ರವಾಸವನ್ನು ರದ್ದುಗೊಳಿಸಿದ್ದರು.

ಶನಿವಾರ ಜೇಟ್ಲಿ ಎಐಎಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಿಗ್ಗೆ ಶಸ್ತ್ರಚಿಕಿತ್ಸೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...