alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಆಯೋಗದ ಅಧ್ಯಕ್ಷೆಯಿಂದಾಯ್ತು ಪ್ರಮಾದ

swati-maliwal

ನವದೆಹಲಿ: ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಹೆಸರನ್ನು ಬಹಿರಂಗಪಡಿಸಿದ ಆರೋಪದ ಮೇಲೆ ನವದೆಹಲಿಯ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ವಿರುದ್ಧ ಬುರಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬುರಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿದ್ದ ದುಷ್ಕರ್ಮಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿದ್ದ. ಅಲ್ಲದೇ ಆಕೆಗೆ ಚಿತ್ರ ಹಿಂಸೆ ನೀಡಿದ್ದು, ಕೇಸ್ ದಾಖಲಾಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರ ಬಂದಿದ್ದ. ಹೀಗೆ ಹೊರ ಬಂದ ಆರೋಪಿ ಬಾಲಕಿ ಮೇಲೆ ಮತ್ತೆ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣದಲ್ಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿವೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಆರೋಪ ಮಾಡಿದ್ದರು.

ಅಲ್ಲದೇ ಅತ್ಯಾಚಾರ ಎಸಗಿದ ಆರೋಪಿಯನ್ನು ಬಂಧಿಸುವಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿಯೂ ಒತ್ತಾಯಿಸಿದ್ದು, ಈ ಸಂದರ್ಭದಲ್ಲಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಹೆಸರನ್ನು ಬಹಿರಂಗಪಡಿಸಿದ್ದರು. ಈ ಹಿನ್ನಲೆಯಲ್ಲಿ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ವಿರುದ್ಧ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...