alex Certify
ಕನ್ನಡ ದುನಿಯಾ       Mobile App
       

Kannada Duniya

ಹೊತ್ತಿ ಉರಿದ ಹೊಟೇಲ್: ಇಬ್ಬರ ಸಾವು, 6 ಮಂದಿಗೆ ಗಾಯ

ಲಕ್ನೋದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಚಾರ್ಬಾಗ್ ರೈಲ್ವೆ ನಿಲ್ದಾಣದ ಬಳಿಯಿರುವ ವಿರಾಟ್ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದೆ. ಪ್ರವಾಸಿಗರು ಹೊಟೇಲ್ ಒಳಗೆ ಸಿಲುಕಿಕೊಂಡಿದ್ದರು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 6ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.

ಬೆಂಕಿಯ ಹೊಗೆ ಸಂಪೂರ್ಣ ಹೊಟೇಲ್ ಆವರಿಸಿದೆ. ದೊಡ್ಡ ಶಬ್ಧದೊಂದಿಗೆ ಹೊಟೇಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗ್ತಿದೆ. ನೋಡ ನೋಡ್ತಿದ್ದಂತೆ ಬೆಂಕಿ ಇಡೀ ಹೊಟೇಲ್ ಆವರಿಸಿಕೊಂಡಿದೆಯಂತೆ. ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಯಶಸ್ವಿಯಾಗಿದೆ.

ಘಟನೆ ಮಂಗಳವಾರ ಬೆಳಿಗ್ಗೆ 5.30 ರ ಸುಮಾರಿಗೆ ನಡೆದಿದೆ. ಹೊಗೆ ಏಳ್ತಿದ್ದಂತೆ ಹೊಟೇಲ್ ನಲ್ಲಿದ್ದವರು ಭಯಗೊಂಡಿದ್ದಾರೆ. ಪೊಲೀಸರಿಗೆ ಬೆಳಿಗ್ಗೆ 6.15ರ ಸುಮಾರಿಗೆ ಮಾಹಿತಿ ನೀಡಲಾಗಿದೆ. 12ಕ್ಕೂ ಹೆಚ್ಚು ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದೆ ಎಂದು ಅಂದಾಜಿಸಲಾಗಿದೆ. ಘಟನೆ ನಂತ್ರ ಹೊಟೇಲ್ ಮ್ಯಾನೇಜರ್ ನಾಪತ್ತೆಯಾಗಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...