alex Certify
ಕನ್ನಡ ದುನಿಯಾ       Mobile App
       

Kannada Duniya

ಜೈಲಿನ ಮುಂಭಾಗದಲ್ಲೇ ಜೈಲಾಧಿಕಾರಿ ಮೇಲೆ ಗುಂಡಿನ ದಾಳಿ

ಜೈಲು ಅಧಿಕಾರಿಯ ಮೇಲೆ ಜೈಲಿನ ಮುಂಭಾಗದಲ್ಲೇ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪುಣೆಯ ಯರವಾಡ ಜೈಲಿನ ಮುಂಭಾಗದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಜೈಲಾಧಿಕಾರಿ ಮೋಹನ್ ಪಾಟೀಲ್ ಗುಂಡಿನ ದಾಳಿಯಿಂದ ಬಚಾವಾಗಿದ್ದಾರೆ.

ಮೋಹನ್ ಪಾಟೀಲ್ ಜೈಲಿನ ಒಳಗೆ ಪ್ರವೇಶಿಸುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಅವರ ಗುರಿ ತಪ್ಪಿದ್ದು, ಮೋಹನ್ ಪಾಟೀಲ್ ಅಪಾಯದಿಂದ ಪಾರಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...