alex Certify
ಕನ್ನಡ ದುನಿಯಾ       Mobile App
       

Kannada Duniya

ಮತಪೆಟ್ಟಿಗೆ ಸೇರ್ತಿದೆ ಅಭ್ಯರ್ಥಿಗಳ ಹಣೆಬರಹ

chip-23

ಪಂಜಾಬ್ ವಿಧಾನಸಭಾ ಚುನಾವಣೆಗೆ ಮತದಾನ ಶುರುವಾಗಿದೆ. ಅದೃಷ್ಟ ಪರೀಕ್ಷೆಗಿಳಿದಿರುವ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರ್ತಾ ಇದೆ. ಮತದಾನಕ್ಕೆ ಪಂಜಾಬ್ ಜನರು ಉತ್ಸುಕರಾಗಿದ್ದಾರೆ. ಬೆಳ್ಳಂಬೆಳಿಗ್ಗೆಯೇ ಮತಗಟ್ಟೆ ಮುಂದೆ ದೊಡ್ಡ ಕ್ಯೂ ಕಾಣಸಿಗ್ತಾ ಇದೆ.

117 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. 1.98 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. 1145 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಮತದಾರ ಯಾರಿಗೆ ಜೈ ಎನ್ನುತ್ತಾನೆನ್ನುವುದು ಮಾರ್ಚ್ 11 ರಂದು ಹೊರಬರಲಿದೆ.

ಇನ್ನು ಗೋವಾದಲ್ಲಿ ಕೂಡ ಮತದಾನ ಶುರುವಾಗಿದೆ. 40 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 251 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 11 ಲಕ್ಷ 10 ಸಾವಿರದ 884 ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇದ್ರಲ್ಲಿ 5 ಲಕ್ಷ 46 ಸಾವಿರ ಪುರುಷರಾದ್ರೆ ಐದು ಲಕ್ಷ 64 ಸಾವಿರ ಮಹಿಳೆಯರು ಮತದಾನ ಮಾಡ್ತಿದ್ದಾರೆ.

ಎರಡೂ ರಾಜ್ಯಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...