alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ರಾನ್ಸ್ ಫಾರ್ಮರ್ ಸ್ಪೋಟಿಸಿ ಐವರು ಸಾವು

ಜೈಪುರ್: ರಾಜಸ್ತಾನದಲ್ಲಿ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ಐವರು ಸಾವನ್ನಪ್ಪಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಜೈಪುರ್ ಜಿಲ್ಲೆಯ ಶಾಪ್ ಪುರ ಪಟ್ಟಣಕ್ಕೆ ಸಮೀಪದಲ್ಲಿ ಖಾತಲೈ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಮದುವೆಯ ಆಚರಣೆಯ ಭಾಗವಾಗಿ ಕುಟುಂಬದವರು, ಬಂಧು –ಬಾಂಧವರು ಮೆರವಣಿಗೆ ಹೋಗುವ ಸಂದರ್ಭದಲ್ಲಿ ರಸ್ತೆ ಬದಿಯಲ್ಲೇ ಇದ್ದ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡಿದೆ.

ಸ್ಪೋಟದ ತೀವ್ರತೆಗೆ ಐವರು ಸಾವನ್ನಪ್ಪಿದ್ದು, 12 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ರಕ್ಷಣಾ ತಂಡಗಳೊಂದಿಗೆ ಧಾವಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಜೈಪುರ್ ಗ್ರಾಮೀಣ ಎಸ್.ಪಿ. ಡಾ. ರಾಮೇಶ್ವರ್ ಸಿಂಗ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...