alex Certify
ಕನ್ನಡ ದುನಿಯಾ       Mobile App
       

Kannada Duniya

ಐದು ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ

ಉತ್ತರ ಪ್ರದೇಶದ ಷಹಜಹಾನ್ಪುರದಲ್ಲಿ ಐದು ವರ್ಷದ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಮನೆಯವರಿಗೆ ವಿಷ್ಯ ತಿಳಿಸಿದ ಬಾಲಕಿ ಪಾಲಕರ ಮೇಲೆ ಹಲ್ಲೆ ನಡೆದಿದೆ. ನಂತ್ರ ಬಾಲಕಿ ಪಾಲಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕೋಟ್ವಾಲಿ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದ್ದು. ಆರೋಪಿ ಯುವಕ ಅನೇಕ ಬಾರಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಮೂರು ತಿಂಗಳ ಹಿಂದೆ ಬಾಲಕಿ ಆರೋಗ್ಯದಲ್ಲಿ ಏರುಪೇರಾಗಿದೆ. ಈ ವೇಳೆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆಬ್ರವರಿ 10ರಂದು ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೇಳೆ ಬಾಲಕಿ ಗುಪ್ತಾಂಗದಲ್ಲಿ ಗಾಯವಾಗಿರುವ ಸಂಗತಿ ಹೊರಬಿದ್ದಿದೆ.

ಮನೆಯಲ್ಲಿ ಯಾರಿಗೂ ವಿಷ್ಯ ಹೇಳದಂತೆ ಆರೋಪಿ ಬಾಲಕಿಯನ್ನು ಬೆದರಿಸಿದ್ದ ಎನ್ನಲಾಗಿದೆ. ಆರೋಪಿ ಮನೆಯವರು ಮಗುವಿನ ತಂದೆ-ತಾಯಿ ಮೇಲೆ ಹಲ್ಲೆ ನಡೆಸಿದ್ದರಂತೆ. ಘಟನೆ ಬಗ್ಗೆ ವಿಚಾರಣೆ ಮುಂದುವರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...