alex Certify
ಕನ್ನಡ ದುನಿಯಾ       Mobile App
       

Kannada Duniya

ಕೇರಳದ ಪರಿಸ್ಥಿತಿ ಗಂಭೀರ: ಸಂಪೂರ್ಣ ನೆರವಿಗೆ ಸಿದ್ಧವೆಂದ ಮೋದಿ

ಕೇರಳದ ಪರಿಸ್ಥಿತಿ ಇನ್ನೂ ಗಂಭೀರವಾಗಿದೆ. ಮಳೆ ಆರ್ಭಟಕ್ಕೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಪ್ರಕಾರ ಕೇರಳದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗಲಿದೆಯಂತೆ. ಮಳೆಯಿಂದಾಗಿ ಕುಡಿಯುವ ನೀರೂ ಸರಿಯಾಗಿ ಸಿಗ್ತಿಲ್ಲ. ಸ್ವಾತಂತ್ರ್ಯ ದಿನದಂದು ಮಾತನಾಡಿದ ಸಿಎಂ ಪಿಣರಾಯಿ ವಿಜಯನ್ ರಾಜ್ಯದಲ್ಲಿ 94 ವರ್ಷಗಳಲ್ಲಿ ಇದೇ ಮೊದಲ ಬಾರಿ ಇಷ್ಟು ಮಳೆಯಾಗ್ತಿದ್ದು, ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ಸಿಎಂ ಪರಿಹಾರ ನಿಧಿ ಖಾತೆ ವಿವರವನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ.

ಕೇರಳದ ಪರಿಸ್ಥಿತಿ ಬಗ್ಗೆ ಸಿಎಂ, ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆಸಿದ್ದಾರೆ. ಮಾತುಕತೆ ನಂತ್ರ ಟ್ವಿಟ್ ಮಾಡಿರುವ ಮೋದಿ ಇಡೀ ದೇಶ ಕೇರಳದ ಜೊತೆಗಿದೆ. ಸಂಕಟದಿಂದ ಹೊರ ಬರಲು ನೆರವಾಗಲಿದೆ ಎಂದು ಮೋದಿ ಭರವೆಸ ನೀಡಿದ್ದಾರೆ. ಕೇಂದ್ರ ಸರ್ಕಾರ ಕೇರಳಕ್ಕೆ ಎಲ್ಲ ಪರಿಸ್ಥಿತಿಯಲ್ಲೂ ನೆರವಾಗಲಿದೆ. ರಾಜ್ಯದಲ್ಲಿ ಪರಿಹಾರ ಮತ್ತು ರಕ್ಷಣೆ ಕಾರ್ಯದಲ್ಲಿ ಕೊರತೆಯಾಗದಂತೆ ಕೇಂದ್ರ ನೆರವಾಗಲಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.

ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಈಗಾಗಲೇ 44ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಮಂದಿ ಮನೆ, ಭೂಮಿ ಕಳೆದುಕೊಂಡಿದ್ದು, ಅನೇಕರು ನಾಪತ್ತೆಯಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...