alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯ್ ಮಲ್ಯ ಹೇಳಿಕೆ ಕುರಿತು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದೇನು…?

ತಾವು ಭಾರತ ತೊರೆಯುವ ಮುನ್ನ ಬ್ಯಾಂಕುಗಳಲ್ಲಿನ ಸಾಲವನ್ನು ಇತ್ಯರ್ಥಪಡಿಸಿಕೊಳ್ಳುವ ಸಲುವಾಗಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ್ದಾಗಿ ಮದ್ಯ ದೊರೆ ವಿಜಯ ಮಲ್ಯ ನೀಡಿರುವ ಹೇಳಿಕೆಗೆ ಅರುಣ್ ಜೇಟ್ಲಿ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅರುಣ್ ಜೇಟ್ಲಿ, ತಾವು ವಿಜಯ ಮಲ್ಯರನ್ನು ಭೇಟಿ ಮಾಡಿಯೇ ಇಲ್ಲ. ಜೊತೆಗೆ ಭೇಟಿಗೆ ಅವಕಾಶವನ್ನೂ ಮಾಡಿಕೊಟ್ಟಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ರಾಜ್ಯಸಭಾ ಸದಸ್ಯರಾಗಿದ್ದ ವಿಜಯ್ ಮಲ್ಯ, ಒಮ್ಮೆ ತಾವು ಲೋಕಸಭೆಯಲ್ಲಿನ ತಮ್ಮ ಕಚೇರಿಗೆ ತೆರಳುವ ವೇಳೆ ಎದುರಾಗಿದ್ದರು. ಆಗ ಬ್ಯಾಂಕ್ ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸ್ತಾಪಿಸಲು ಮುಂದಾದಾಗ ಈ ಕುರಿತು ಬ್ಯಾಂಕ್ ಅಧಿಕಾರಿಗಳ ಬಳಿಯೇ ಮಾತನಾಡಿ ಎಂದು ತಿಳಿಸಿದ್ದೆ ಎಂದು ಅರುಣ್ ಜೇಟ್ಲಿ ತಮ್ಮ ಪೋಸ್ಟ್ ನಲ್ಲಿ ಹೇಳಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...