alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದೇ ದಿನ ಲಾಲು ಪ್ರಸಾದ್ ಯಾದವ್ ಗೆ 2 ಶಾಕ್

ಬಹುಕೋಟಿ ಮೇವು ಹಗರಣದಲ್ಲಿ ಜೈಲು ಸೇರಿರುವ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಇಂದು ಎರಡೆರಡು ಶಾಕ್. ಜಾರ್ಖಂಡ್ ಹೈಕೋರ್ಟ್ ಲಾಲು ಪ್ರಸಾದ್ ಯಾದವ್ ಜಾಮೀನು ಅವಧಿ ವಿಸ್ತರಣೆ ನಿರಾಕರಿಸಿದೆ. ಜೊತೆಗೆ ಆಗಸ್ಟ್ 30 ರೊಳಗೆ ಶರಣಾಗುವಂತೆ ಸೂಚನೆ ನೀಡಿದೆ. ಇದಾದ ಕೆಲವೇ ಸಮಯದಲ್ಲಿ ಜಾರಿ ನಿರ್ದೇಶನಾಲಯ ಲಾಲು ಪ್ರಸಾದ್ ಯಾದವ್ ಹಾಗೂ ಕುಟುಂಬಸ್ಥರ ವಿರುದ್ಧ ರೈಲ್ವೆ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಿದೆ.

ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ, ಮಗ ತೇಜಸ್ವಿ ಯಾದವ್, ಪಿ.ಸಿ.ಗುಪ್ತಾ, ಅವ್ರ ಪತ್ನಿ ಸರಳ ಗುಪ್ತಾ ಹೆಸರಿದೆ. ಸುಮಾರು 12 ಕ್ಕೂ ಹೆಚ್ಚು ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ಸಲ್ಲಿದೆ.

ಅನಾರೋಗ್ಯದಿಂದ ಬಳಲುತ್ತಿರುವ ಲಾಲು ಪ್ರಸಾದ್ ಯಾದವ್ ಮುಂಬೈನ ಏಷ್ಯನ್ ಹಾರ್ಟ್ ಇನ್ಸ್ಟ್ಯೂಟ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗಾಗಿ ಜಾಮೀನು ಅವಧಿ ವಿಸ್ತರಣೆ ಮಾಡಬೇಕೆಂದು ಕೋರ್ಟ್ ಗೆ ಮನವಿ ಸಲ್ಲಿಸಲಾಗಿತ್ತು. ಕೋರ್ಟ್ ಮನವಿ ತಿರಸ್ಕರಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...