alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಜಿ ಮುಖ್ಯಮಂತ್ರಿ ಸುಂದರ್ ಲಾಲ್ ಪಟ್ವಾ ನಿಧನ

sundar

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಸುಂದರ್ ಲಾಲ್ ಪಟ್ವಾ ಇಹಲೋಕ ತ್ಯಜಿಸಿದ್ದಾರೆ. ಸುಂದರ್ ಲಾಲ್ ಪಟ್ವಾ ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಂಗಳವಾರ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ. ಪಟ್ವಾ ಎರಡು ಬಾರಿ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಪಟ್ವಾ ನಿಧನದ ನಂತ್ರ ರಾಜ್ಯ ಸರ್ಕಾರ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಣೆ ಮಾಡಿದೆ. ಪಟ್ವಾ, 1924, ನವೆಂಬರ್ 11 ರಲ್ಲಿ ಕುಕಡೇಶ್ವರದಲ್ಲಿ ಜನಿಸಿದ್ದರು. ಮಾಜಿ ಕೇಂದ್ರ ಸಚಿವರಾಗಿದ್ದ ಪಟ್ವಾ, ಮಧ್ಯಪ್ರದೇಶದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು.

ಜನವರಿ 20,1980 ರಿಂದ ಫೆಬ್ರವರಿ 17,1980 ರವರೆಗೆ ಭಾರತೀಯ ಜನತಾ ಪಾರ್ಟಿಯಿಂದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎರಡನೇ ಬಾರಿ ಮಾರ್ಚ್ 5, 1990 ರಿಂದ ಡಿಸೆಂಬರ್ 15,1992 ರವರೆಗೆ ಮುಖ್ಯಮಂತ್ರಿಯಾಗಿದ್ದರು. ಜನಸಂಘದ ಮೂಲಕ ಅವರು ರಾಜಕೀಯಕ್ಕೆ ಪ್ರವೇಶ ಮಾಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...