alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂಬೈನಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಮಹಾರಾಷ್ಟ್ರದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಮತ್ತು ಎಟಿಎಸ್ ಮಾಜಿ ಮುಖ್ಯಸ್ಥ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಿಂಮಾಂಶು ರಾಯ್ ತಮ್ಮ ಮನೆಯಲ್ಲೇ ಇಂದು ಮಧ್ಯಾಹ್ನ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ.

ಇವರು 1988 ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದು, ಮುಖ್ಯವಾದ ಪ್ರಕರಣಗಳನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದರಲ್ಲೂ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ನ ಚಾಲಕನ ಮೇಲಿನ ಫೈರಿಂಗ್, ಲೀಲಾ ಖಾನ್ ಡಬಲ್ ಮರ್ಡರ್ ಪ್ರಕರಣ, ಜರ್ನಲಿಸ್ಟ್ ಜೆಡೇ ಕೊಲೆ ಪ್ರಕರಣ ಮತ್ತು 2013 ರಲ್ಲಿ ನಡೆದ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಪ್ರಮುಖವಾದವು.

ಮೂಲಗಳ ಪ್ರಕಾರ ಹಿಮಾಂಶು ರಾಯ್ ಕ್ಯಾನ್ಸರ್ ಗೆ ತುತ್ತಾಗಿ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಅಂತಾ ಹೇಳಲಾಗ್ತಿದೆ. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯ ದುರಂತ ಸಾವಿಗೆ ಗಣ್ಯರು ಮತ್ತು ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...