alex Certify
ಕನ್ನಡ ದುನಿಯಾ       Mobile App
       

Kannada Duniya

ಟಾಪ್ 10 ಕ್ರಿಮಿನಲ್ ಗಳ ಪಟ್ಟಿಯಲ್ಲಿದ್ದಾನೆ ಈ ಮಾಜಿ ಎಂಎಲ್ಎ

rambeer-shokeen3457ರಾಜಕಾರಣಿಗಳ ವಿರುದ್ದ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಸಂಗತಿ ಅವರು ಚುನಾವಣೆಗೆ ಸ್ಪರ್ಧಿಸುವ ವೇಳೆ ಬೆಳಕಿಗೆ ಬರುತ್ತಿದೆ. ಚುನಾವಣಾ ಆಯೋಗದ ನಿಯಮಾವಳಿಗಳಂತೆ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರ ಘೋಷಿಸುವುದರ ಜೊತೆಗೆ ತನ್ನ ವಿರುದ್ದ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಕುರಿತೂ ಮಾಹಿತಿ ನೀಡಬೇಕಿದೆ.

ದೆಹಲಿಯ ಮಾಜಿ ಶಾಸಕನೊಬ್ಬ ಟಾಪ್ 10 ಕ್ರಿಮಿನಲ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾನೆಂದರೆ ನೀವು ನಂಬಲೇಬೇಕು. ದೆಹಲಿ ಪೊಲೀಸರು ಕೆಲ ದಿನಗಳ ಹಿಂದಷ್ಟೇ ತಲೆಮರೆಸಿಕೊಂಡಿರುವ ಟಾಪ್ 10 ಕ್ರಿಮಿನಲ್ ಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ದೆಹಲಿಯ ಕಮ್ರುದ್ದೀನ್ ನಗರ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೆಸ್ ನ ರಾಂಬೀರ್ ಶೌಕೀನ್ ಸ್ಥಾನ ಪಡೆದುಕೊಂಡಿದ್ದಾನೆ.

ರಾಂಬೀರ್ ಶೌಕೀನ್ ಉತ್ತರಾಖಂಡದ ಪೊಲೀಸರ ವಶದಲ್ಲಿದ್ದ ಕುಖ್ಯಾತ ಪಾತಕಿಯೊಬ್ಬ ತಪ್ಪಿಸಿಕೊಳ್ಳಲು ತನ್ನ ಸಂಬಂಧಿ ನೀರಜ್ ಜೊತೆ ಸಂಚು ರೂಪಿಸಿದ್ದನೆಂದು ಆರೋಪಿಸಲಾಗಿತ್ತು. ಕಳೆದ ವರ್ಷದ ಡಿಸೆಂಬರ್ ನಲ್ಲಿ ಈ ಪ್ರಕರಣ ನಡೆದಿದ್ದು, ರಾಂಬೀರ್ ಶೌಕೀನ್ ಅಂದಿನಿಂದಲೂ ತಲೆಮರೆಸಿಕೊಂಡಿದ್ದು, ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ರಾಜಕೀಯವಾಗಿ ನನ್ನನ್ನು ಮುಗಿಸಲು ಸಂಚು ರೂಪಿಸಲಾಗಿದೆ ಎಂದು ಹೇಳಿಕೊಂಡಿದ್ದ. ಆದರೆ ರಾಂಬೀರ್ ಶೌಕೀನ್, ತನ್ನ ಸಂಬಂಧಿ ಜೊತೆ ಸೇರಿಕೊಂಡು ಭೂಗತ ಚಟುವಟಿಕೆ ನಿಯಂತ್ರಿಸುತ್ತಿದ್ದ ಹಾಗೂ ಚುನಾವಣೆಗಳಲ್ಲಿ ಅಕ್ರಮ ಚಟುವಟಿಕೆಯನ್ನೂ ನಡೆಸುತ್ತಿದ್ದನೆಂದು ಆರೋಪಿಸಲಾಗಿತ್ತು. ಇದೀಗ ದೆಹಲಿ ಪೊಲೀಸರು ಸಿದ್ದಪಡಿಸಿರುವ ಟಾಪ್ 10 ಕ್ರಿಮಿನಲ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಲ್ಲದೇ ಈತನ ಬಂಧನಕ್ಕೆ 1 ಲಕ್ಷ ರೂ. ಬಹುಮಾನವನ್ನೂ ಘೋಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...