alex Certify
ಕನ್ನಡ ದುನಿಯಾ       Mobile App
       

Kannada Duniya

ಮಧ್ಯಪ್ರದೇಶದಲ್ಲಿ ಕಾಮುಕರ ಅಟ್ಟಹಾಸ

ಭೋಪಾಲ್: ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಕಾನೂನು ಜಾರಿಗೆ ತರಲು ಚಿಂತನೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ನಡೆದ 2 ಆಘಾತಕಾರಿ ಘಟನೆಗಳಲ್ಲಿ 19 ವರ್ಷದ ವಿದ್ಯಾರ್ಥಿನಿ ಮತ್ತು 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಲಾಗಿದೆ.

ವಿದ್ಯಾರ್ಥಿನಿಯನ್ನು ಭೋಪಾಲ್ ರೈಲ್ವೇ ಹಳಿಗಳ ಬಳಿ ಕರೆದೊಯ್ದು ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ. ವಿಧಿಶಾ ಜಿಲ್ಲೆಯ ವಿದ್ಯಾರ್ಥಿನಿ ನಾಗರೀಕ ಸೇವಾ ಪರೀಕ್ಷೆಗೆ ತರಬೇತಿ ಪಡೆಯಲು ಆಗಮಿಸಿದ್ದಳು.

ಊರಿಗೆ ಹೋಗಲು ರೈಲು ನಿಲ್ದಾಣಕ್ಕೆ ತೆರಳುತ್ತಿದ್ದ ಆಕೆಯನ್ನು ಎಳೆದೊಯ್ದ ಕಾಮುಕರು ಅತ್ಯಾಚಾರ ಎಸಗಿ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಪ್ರಯತ್ನಿಸಿದ್ದಾರೆ. ಪ್ರಜ್ಞೆ ತಪ್ಪಿದ ಯುವತಿ ಮೃತಪಟ್ಟಿರಬಹುದೆಂದು ಪರಾರಿಯಾಗಿದ್ದಾರೆ.

ಎಚ್ಚರಗೊಂಡ ವಿದ್ಯಾರ್ಥಿನಿ ಪೊಲೀಸ್ ಆಗಿರುವ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಭೋಪಾಲ್ ಪೊಲೀಸರಿಗೆ ದೂರು ನೀಡಿದ್ದಾಳೆ.

ಮತ್ತೊಂದು ಪ್ರಕರಣ ಬೆತಾಲ್ ಜಿಲ್ಲೆಯಲ್ಲಿ ನಡೆದಿದ್ದು, 3 ವರ್ಷದ ಮಗುವಿನ ಮೇಲೆ ಸಂಬಂಧಿಯಾಗಿರುವ 15 ವರ್ಷದ ಬಾಲಕ ಅತ್ಯಾಚಾರ ಎಸಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...