alex Certify
ಕನ್ನಡ ದುನಿಯಾ       Mobile App
       

Kannada Duniya

ಮಳೆ ಅಬ್ಬರಕ್ಕೆ ಕಾರಿನಲ್ಲಿ ಪ್ರಾಣ ಬಿಟ್ರು ನಾಲ್ಕು ಮಂದಿ

ಮಧ್ಯಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಮಾಡಿದೆ. ಮಂಗಳವಾರ ಸುರಿದ ಭಾರೀ ಮಳೆಗೆ ಬೇರೆ ಬೇರೆ ಜಿಲ್ಲೆಗಳಲ್ಲಿ ಒಟ್ಟೂ 8 ಮಂದಿ ಸಾವನ್ನಪ್ಪಿದ್ದಾರೆ. ಮಂಡ್ಸೌರ್ ಜಿಲ್ಲೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿರುವ ಸುದ್ದಿ ಹೊರಬಿದ್ದಿದೆ.

ಮಂಡ್ಸೌರ್ ಜಿಲ್ಲೆಯ ಗುಲಯಾನಾ ಪ್ರದೇಶದಲ್ಲಿ ಕಾರಿನಲ್ಲಿ ಪ್ರಯಾಣ ಮಾಡ್ತಿದ್ದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಮಳೆ ಕಾರಣದಿಂದಾಗಿ ಕಾರು ಮುಂದೆ ಚಲಿಸಲಿಲ್ಲ. ಕಾರಿನ ಬಾಗಿಲು ತೆರೆದು ಹೊರ ಬರಲು ಸಾಧ್ಯವಾಗಲಿಲ್ಲ. ನಾಲ್ವರೂ ಕಾರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರು ಸೇತುವೆ ಮೇಲೆ ಹೋಗ್ತಿತ್ತಂತೆ. ಸೇತುವೆ ಮೇಲೆ ನೀರು ತುಂಬಿದ ಕಾರಣ ನಿಯಂತ್ರಣಕ್ಕೆ ಸಿಗಲಿಲ್ಲ. ಘಟನೆ ನಡೆದ ಅರ್ಧ ಕಿಲೋಮೀಟರ್ ದೂರದಲ್ಲಿ ಕಾರು ಸಿಕ್ಕಿದೆ. ಕಾರಿನಲ್ಲಿದ್ದವರು ಹೊರ ಬರಲು ಸಾಕಷ್ಟು ಪ್ರಯತ್ನ ನಡೆಸಿದ್ದಾರೆಂದು ಪೊಲೀಸರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...