alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಂಡಾಲ್ ಬಿದ್ದು 4 ಮಂದಿ ಸಾವು : ಅಪಾಯದಿಂದ ಸಿಎಂ ನಾಯ್ಡು ಪಾರು

ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ದೇವಸ್ಥಾನವೊಂದರ ಪೆಂಡಾಲ್ ಬಿದ್ದು ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ದುರ್ಘಟನೆ ವೇಳೆ ಸಿಎಂ ಚಂದ್ರಬಾಬು ನಾಯ್ಡು ಸ್ಥಳದಲ್ಲಿದ್ದರು ಎನ್ನಲಾಗಿದೆ.

ಕೋದಂಡರಾಮ ದೇವಸ್ಥಾನದಲ್ಲಿ ರಾಮನವಮಿ ಸಂದರ್ಭದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಪ್ರತಿ ವರ್ಷ ಇಲ್ಲಿ ರಾಮನವಮಿ ಸಂದರ್ಭದಲ್ಲಿ ವಿಶೇಷ ಪೂಜೆ,ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತದೆ. ಈ ಬಾರಿ ಕಾರ್ಯಕ್ರಮದಲ್ಲಿ ಸಿಎಂ ನಾಯ್ಡು ಪಾಲ್ಗೊಂಡಿದ್ದರು.

ಜೋರಾಗಿ ಬೀಸಿದ ಗಾಳಿಗೆ ಪೆಂಡಾಲ್ ಬಿದ್ದಿದೆ. ಸಿಎಂ ನಾಯ್ಡು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸಿಎಂ ಕುಟುಂಬಸ್ಥರು ಹಾಗೂ ಕೆಲ ಸಚಿವರೊಂದಿಗೆ ದೇವಸ್ಥಾನಕ್ಕೆ ಬಂದಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಡಳಿತ ನೆರವಾಗಲಿದೆ ಎಂದು ನಾಯ್ಡು ಭರವಸೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...