alex Certify
ಕನ್ನಡ ದುನಿಯಾ       Mobile App
       

Kannada Duniya

ದೆಹಲಿಯಲ್ಲಿ ನೆಲಕ್ಕುರುಳಿದ ನಾಲ್ಕು ಅಂತಸ್ತಿನ ಕಟ್ಟಡ

ದೆಹಲಿಯ ಭರತ್ ನಗರ ಇಲಾಖೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ರಕ್ಷಣಾ ಪಡೆ, ರಕ್ಷಣಾ ಕಾರ್ಯ ನಡೆಸುತ್ತಿದೆ.

ಬುಧವಾರ ಬೆಳಿಗ್ಗೆ ಘಟನೆ ನಡೆದಿದೆ. ಸಾವನ್ ಪಾರ್ಕ್ ಬಳಿಯಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಸ್ಥಳೀಯ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಅವಶೇಷದಡಿ 20-25 ಮಂದಿ ಸಿಕ್ಕಿಬಿದ್ದಿರುವ ಸಾಧ್ಯತೆ ಇದೆ. ಪ್ರಸ್ತುತ ರಕ್ಷಣಾ ಕಾರ್ಯ ನಡೆಯುತ್ತಿದ್ದು, 7 ಮಂದಿಯನ್ನು ರಕ್ಷಿಸಲಾಗಿದೆ.

ಎನ್ಸಿಆರ್ ನಲ್ಲಿ ಕಟ್ಟಡ ಕುಸಿದು ಬಿದ್ದ ಮೊದಲ ಘಟನೆ ಇದಲ್ಲ. ಇಲ್ಲಿ ಇಂಥ ಅನೇಕ ದುರ್ಘಟನೆಗಳು ನಡೆದಿವೆ. ಭರತ್ ನಗರದಲ್ಲಿ ಯಾವುದೇ ಸಾವಿನ ವರದಿಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...