alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವರ ಸಾರಥ್ಯದಲ್ಲಿ ನಡೆದಿದೆ ಕಪ್ಪೆಗಳ ‘ಮದುವೆ’

ಮಳೆಗಾಗಿ ಪ್ರಾರ್ಥಿಸಿ ವರುಣ ದೇವನನ್ನು ಒಲಿಸಿಕೊಳ್ಳಲು ಮಧ್ಯ ಪ್ರದೇಶದ ಚತ್ತರ್ಪುರ್ ನಗರದಲ್ಲಿ ಶುಕ್ರವಾರ ಕಪ್ಪೆಗಳ ಮದುವೆ ನಡೆದಿದ್ದು, ಈ ವಿಶೇಷ ಮದುವೆ ಸಮಾರಂಭದಲ್ಲಿ ಮಧ್ಯ ಪ್ರದೇಶ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಲಿತಾ ಯಾದವ್ ಪಾಲ್ಗೊಂಡಿದ್ದು ವಿಶೇಷ.

ಶಾಸ್ತ್ರೋಕ್ತವಾಗಿ ಜೀವಂತ ಕಪ್ಪೆಗಳಿಗೆ ಮದುವೆ ಮಾಡಿಸಲಾಗಿದ್ದು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವೆ ಲಲಿತಾ ಯಾದವ್, ಮಳೆ ಬಾರದೆ ಬುಂದೇಲ್ಕಾಂಡ್ ಜನ ಕಂಗೆಟ್ಟಿದ್ದಾರೆ. ಕಪ್ಪೆಗಳ ಮದುವೆ ಮಾಡಿದರೆ ಮಳೆ ಬರುತ್ತದೆಂಬ ನಂಬಿಕೆಯಿದ್ದು, ಹೀಗಾಗಿ ಈ ಕಾರ್ಯಕ್ರಮ ನಡೆಸಲಾಗಿದೆ ಎಂದಿದ್ದಾರೆ.

ಈ ಹಿಂದೆ ಉತ್ತರ ಪ್ರದೇಶದ ವಾರಣಾಸಿಯಲ್ಲೂ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿಸಿದ್ದು, ಅಲ್ಲಿ ಪ್ಲಾಸ್ಟಿಕ್ ಕಪ್ಪೆಗಳನ್ನು ಬಳಸಿಕೊಳ್ಳಲಾಗಿತ್ತು. ಈ ಮದುವೆ ಸಮಾರಂಭದಲ್ಲಿ ಬ್ಯಾಂಡ್ ಕೂಡಾ ಕರೆಸಲಾಗಿದ್ದು, ಮದುವೆಯಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರು ಬ್ಯಾಂಡ್ ಸದ್ದಿಗೆ ಹೆಜ್ಜೆ ಹಾಕಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...