alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ರೇಕಿಂಗ್ ನ್ಯೂಸ್: ಗದಗಿನ ತೋಂಟದಾರ್ಯ ಸ್ವಾಮೀಜಿ ವಿಧಿವಶ

ಗದಗಿನ ತೋಂಟದಾರ್ಯ ಮಠದ ಶ್ರೀಗಳು ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತದಿಂದ ಶ್ರೀ ಗಳು ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ.

ರಾತ್ರಿ ಎಂದಿನಂತೆ ಮಲಗಿದ್ದ ಶ್ರೀಗಳು ಬೆಳಿಗ್ಗೆ ಎಷ್ಟು ಹೊತ್ತಾದರೂ ಏಳದ ಕಾರಣ ಭಕ್ತರು ಹೋಗಿ ನೋಡಿದ ಸಂದರ್ಭದಲ್ಲಿ ಸ್ವಾಮೀಜಿಗಳು ಅಸ್ವಸ್ಥರಾಗಿರುವುದು ಕಂಡು ಬಂದಿದೆ.

ಸ್ವಾಮೀಜಿಯವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಫಲಕಾರಿಯಾಗಲಿಲ್ಲವೆಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಇಂದು ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಟಿ ಸುದ್ದಿ ಗೋಷ್ಟಿ ನಡೆಸುತ್ತಿರುವಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಶ್ರೀ ಗಳ ನಿಧನದ ಸುದ್ದಿ ತಿಳಿದುಬಂದಿದೆ. ಇದನ್ನು ಪತ್ರಿಕಾಗೋಷ್ಟಿಯಲ್ಲಿ ಕುಮಾರಸ್ವಾಮಿಯವರು ಪ್ರಕಟಿಸಿ, ಶ್ರೀ ಗಳ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಹೆಚ್.ಡಿ. ದೇವೇಗೌಡ, ಸಿದ್ದರಾಮಯ್ಯ ಸೇರಿದಂತೆ ಆನೇಕ ಗಣ್ಯರು ಶ್ರೀ ಗಳ ಅಕಾಲಿಕ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಸುದ್ದಿಗೋಷ್ಟಿಯಲ್ಲೇ ಶ್ರೀಗಳ ಆತ್ಮಕ್ಕೆ ಶಾಂತಿ ಕೋರಿ 2 ನಿಮಿಷಗಳ ಕಾಲ ಮೌನಾಚರಣೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...