alex Certify
ಕನ್ನಡ ದುನಿಯಾ       Mobile App
       

Kannada Duniya

ಫೋಟೋ ತೆಗೆಯದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ

gau-rakshaks-mistake-student-for-journalist-stab-himಗೋ ಹತ್ಯೆ ನಿಷೇಧ ವಿರೋಧಿಸಿ ಕೇರಳ ಹಾಗೂ ತಮಿಳುನಾಡಿನಲ್ಲಿ ಆಯೋಜಿಸಿದ್ದ ‘ಬೀಫ್ ಫೆಸ್ಟಿವಲ್’ ಖಂಡಿಸಿ ಹರಿಯಾಣದ ಸೋನೆಪತ್ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರು ತಾವು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವ ವೇಳೆ ಫೋಟೋ ತೆಗೆಯಲಿಲ್ಲವೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿದಿದ್ದಾರೆ.

ಕೇರಳದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಸುವೊಂದನ್ನು ಸಾರ್ವಜನಿಕವಾಗಿ ಹತ್ಯೆ ಮಾಡಿದ್ದನ್ನು ಖಂಡಿಸಿ ಹಾಗೂ ತಮಿಳುನಾಡಿನಲ್ಲಿ ‘ಬೀಫ್ ಫೆಸ್ಟಿವಲ್’ ಆಯೋಜಿಸಿದ್ದನ್ನು ಖಂಡಿಸಿ ಕೆಲವರು ಸೋನೆಪತ್ ಜಿಲ್ಲೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಈ ವೇಳೆ ಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಶಿವಂ ಎಂಬ ವಿದ್ಯಾರ್ಥಿ ಪ್ರತಿಭಟನಾ ಸ್ಥಳಕ್ಕೆ ಬಂದಿದ್ದು, ತನ್ನ ಸ್ನೇಹಿತರೊಬ್ಬರ ಕ್ಯಾಮರಾವನ್ನು ಕೈಯ್ಯಲ್ಲಿಡಿದುಕೊಂಡಿದ್ದನೆಂದು ಹೇಳಲಾಗಿದೆ. ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವ ವೇಳೆ ಕೆಲವರು ಫೋಟೋ ತೆಗೆಯಲು ಆತನಿಗೆ ಹೇಳಿದ್ದು, ಇದಕ್ಕೆ ಶಿವಂ ನಿರಾಕರಿಸಿದ್ದಾನೆ. ಆಗ ಮಾತಿನ ಚಕಮಕಿ ನಡೆದಿದೆ.

ಇದಾದ ಕೆಲ ಹೊತ್ತಿನಲ್ಲೇ ಶಿವಂನನ್ನು ಹಿಂಬಾಲಿಸಿಕೊಂಡು ಹೋದ 19 ವರ್ಷದ ಮೋಹಿತ್ ಮತ್ತಾತನ ಇಬ್ಬರು ಸ್ನೇಹಿತರು ಚಾಕುವಿನಿಂದ ಇರಿದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಶಿವಂನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೋಹಿತ್ ನನ್ನು ಬಂಧಿಸಿದ್ದು, ಪರಾರಿಯಾಗಿರುವ ಇತರೆ ಇಬ್ಬರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...