alex Certify
ಕನ್ನಡ ದುನಿಯಾ       Mobile App
       

Kannada Duniya

ಕನೌಜ್ ನಲ್ಲಿ ಅಖಿಲೇಶ್, ಮೈನ್ಪುರಿಯಲ್ಲಿ ಮುಲಾಯಂ ಸ್ಪರ್ಧೆ ನಿಶ್ಚಿತ

ಎಸ್ಪಿ ನಾಯಕ ಅಖಿಲೇಶ್ ಯಾದವ್ ಕನೌಜ್ ಕ್ಷೇತ್ರದಿಂದ ಲೋಕಸಭಾ ಚುನಾವಣಾ ಕಣಕ್ಕಿಳಿಯಲಿದ್ದಾರೆ. ಮುಲಾಯಂ ಸಿಂಗ್ ಯಾದವ್ ಮೈನ್ಪುರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ನಡೆಸಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪತ್ನಿ ಡಿಂಪಲ್ ಯಾದವ್ ಸ್ಪರ್ಧೆ ನಡೆಸುವುದಿಲ್ಲವೆಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಕನೌಜ್ ನಲ್ಲಿ ಕಾರ್ಯಕರ್ತರ ಜೊತೆ ಚುನಾವಣಾ ಸಮೀಕ್ಷೆ ಬಗ್ಗೆ ಮಾತುಕತೆ ನಡೆಸಿದ ಅಖಿಲೇಶ್ ಯಾದವ್, ಮೈತ್ರಿ ಬಗ್ಗೆ ಹೆಚ್ಚು ಮಾತನಾಡಲಿಲ್ಲ. ಎಸ್ಪಿ ಹಾಗೂ ಬಿಎಸ್ಪಿ ಒಂದಾಗಿ ಚುನಾವಣೆ ಎದುರಿಸಲಿದೆ. ಕಾಂಗ್ರೆಸ್ ಕೂಡ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಮೈತ್ರಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಹೊರ ಬಂದಿಲ್ಲ. ಇದೇ ಕಾರಣಕ್ಕೆ ಸೀಟು ಹಂಚಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಅಖಿಲೇಶ್ ನಿರಾಕರಿಸಿದ್ದಾರೆ.

ಕನೌಜ್ ಕ್ಷೇತ್ರದಲ್ಲಿ ಸ್ಪರ್ಧಿಸಿ ಡಿಂಪಲ್ ಯಾದವ್ ಗೆಲುವು ಸಾಧಿಸಿದ್ದರು. ಪತ್ನಿ ಕ್ಷೇತ್ರದಲ್ಲಿಯೇ ಈ ಬಾರಿ ಅಖಿಲೇಶ್ ಕಣಕ್ಕಿಳಿಯಲಿದ್ದಾರೆ. ಮೈತ್ರಿ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಗೆಲ್ಲಿಸುವ ಪ್ರಯತ್ನ ಮಾಡುವಂತೆ ಅಖಿಲೇಶ್ ಯಾದವ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...