alex Certify
ಕನ್ನಡ ದುನಿಯಾ       Mobile App
       

Kannada Duniya

ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಸಿಎಂ ಯೋಗಿಗೆ ಪತ್ರ

ಆಡಳಿತದಲ್ಲಿ ಹಾಸು ಹೊಕ್ಕಾಗಿರುವ ಭ್ರಷ್ಟಾಚಾರದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿರುವುದಾಗಿ ವ್ಯಕ್ತಿಯೊಬ್ಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಪತ್ರ ಬರೆದಿದ್ದಾನೆ.

ಗಾಜಿಯಾಬಾದ್ ನ ಪೆರುಮಾಳ್ ವರ್ಮಾ 1972ರಲ್ಲಿ ಮೀರತ್ ಕಬ್ಬು ವಿಭಾಗದಲ್ಲಿ ಕೆಲಸ ಮಾಡುತ್ತಿದ್ರು. ವಿಭಾಗದ ಮುಖ್ಯಸ್ಥರು, ಪೆರುಮಾಳ್ ರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರಂತೆ. ಹಿರಿಯ ಅಧಿಕಾರಿಗಳ ಲಂಚಾವತಾರದ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದ್ದರಿಂದ ಅವರ ಕೆಲಸಕ್ಕೇ ಕುತ್ತು ಬಂದಿದ್ದಂತೆ. ಅಧಿಕಾರಿಗಳ ಲಂಚಾವತಾರದ ಬಗ್ಗೆ ಪೆರುಮಾಳ್ 1972ರಲ್ಲೇ ದೂರು ದಾಖಲಿಸಿದ್ರು.

ಆದ್ರೆ ಇದುವರೆಗೂ ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ. 1973ರ ಆಗಸ್ಟ್ 20ರಂದು ಪೆರುಮಾಳ್ ರಾಜ್ಯಪಾಲರಿಗೂ ದೂರು ನೀಡಿದ್ರು. ಭ್ರಷ್ಟ ಅಧಿಕಾರಿ ವಿರುದ್ಧ ತನಿಖೆ ನಡೆಸುವಂತೆ ಮನವಿ ಮಾಡಿಕೊಂಡಿದ್ರು. ನ್ಯಾಯ ಕೇಳಿದ ತಪ್ಪಿಗೆ ಪೆರುಮಾಳ್ ಕೆಲಸ ಕಳೆದುಕೊಳ್ಳಬೇಕಾಯ್ತಂತೆ.

ಈ ಬಗ್ಗೆ ಪೆರುಮಾಳ್ ಕೋರ್ಟ್ ನಲ್ಲೂ ಹೋರಾಟ ನಡೆಸಿದ್ರು. ಆದ್ರೆ ನ್ಯಾಯ ಸಿಕ್ಕಿಲ್ಲ. ಹಾಗಾಗಿ ಈ ಭ್ರಷ್ಟಾಚಾರದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದೇನೆ ಅಂತಾ ಸಿಎಂ ಯೋಗಿಗೆ ಪತ್ರ ಬರೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...