alex Certify
ಕನ್ನಡ ದುನಿಯಾ       Mobile App
       

Kannada Duniya

ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸಿಎಂ

ಅನಾರೋಗ್ಯದ ಹಿನ್ನೆಲೆಯಲ್ಲಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆದು ಮರಳಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ.

ತಮ್ಮ ಈ ನಿರ್ಧಾರವನ್ನು ಪಕ್ಷದ ವರಿಷ್ಠರ ಮುಂದೆ ಮನೋಹರ್ ಪರಿಕ್ಕರ್ ತಿಳಿಸಿದ್ದು, ಈ ವೇಳೆ ನೀವೇ ಮುಖ್ಯಮಂತ್ರಿಯಾಗಿ ಮುಂದುವರೆಯಿರಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚಿಸಿದ್ದರೆಂದು ಹೇಳಲಾಗಿದೆ.

ಆದರೆ ಮನೋಹರ್ ಪರಿಕ್ಕರ್ ತಮ್ಮ ನಿರ್ಧಾರವನ್ನು ಬದಲಿಸದಿರಲು ನಿರ್ಧರಿಸಿದ ಹಿನ್ನೆಲೆಯಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಬಿಜೆಪಿ ವರಿಷ್ಠರು ರಾಮ್ ಲಾಲ್ ಹಾಗೂ ಬಿ.ಎಲ್. ಸಂತೋಷ್ ರನ್ನು ಗೋವಾಗೆ ಕಳುಹಿಸಿಕೊಟ್ಟಿದ್ದಾರೆಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...