alex Certify
ಕನ್ನಡ ದುನಿಯಾ       Mobile App
       

Kannada Duniya

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಗೋವಾದ ಸಂಪುಟ ಸಭೆ

ನವದೆಹಲಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕ್ಯಾಬಿನೆಟ್ ಸಭೆ ಕರೆದಿದ್ದಾರೆ. ಇಂದಿನ ಸಭೆಯಲ್ಲಿ ಆಡಳಿತ ಮತ್ತು ಸಂಪುಟ ಪುನರ್ರಚನೆಯ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ.

ಪ್ಯಾಂಕ್ರಿಯಾಟಿಕ್ ಕಾಯಿಲೆಗೆ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್)ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಅಧಿಕೃತ ಮೊದಲ ಸಭೆ ಇದಾಗಿದೆ. ಮಂತ್ರಿಮಂಡಲ, ಮೈತ್ರಿಕೂಟದ ಪಾಲುದಾರರು, ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ, ಗೋವಾ ಫಾರ್ವಡ್ ಪಾರ್ಟಿ ಜೊತೆ ರಾಜ್ಯ ಆಡಳಿತಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.

ಎಂಜಿಪಿ ನಾಯಕ ಹಾಗು ಪಿಡಬ್ಲ್ಯೂಡಿ ಸಚಿವ ಸುದಿನ್ ಧವಳಿಕರ್, ಜಿಎಫ್ಡಿ ಮುಖ್ಯಸ್ಥ ಮತ್ತು ನಗರ ಯೋಜನಾ ಸಚಿವ ವಿಜಯ್ ಸರ್ದೇಸಾಯಿ, ಹಣಕಾಸು ಸಚಿವ ರೋಹನ್ ಖೌಂಟೆ, ಕಲಾ ಮತ್ತು ಸಂಸ್ಕೃತಿ ಸಚಿವ ಗೋವಿಂದ್ ಗಾವಡೆ ಅವರನ್ನು ಸಭೆಗೆ ಆಹ್ವಾನಿಸಲಾಗಿದೆ. ಸ್ವತಂತ್ರ ಅಭ್ಯರ್ಥಿ ಪ್ರಸಾದ್ ಗಾಂವ್ಕರ್ ಕೂಡಾ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಸಂಪುಟದ ಮಂತ್ರಿಗಳ ಖಾತೆ ಅದಲು ಬದಲಾದರೂ ಮನೋಹರ್ ಪರಿಕ್ಕರ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಲಾಗಿದೆ. ಇತ್ತೀಚೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗೋವಾದ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...