alex Certify
ಕನ್ನಡ ದುನಿಯಾ       Mobile App
       

Kannada Duniya

ಅಬ್ಬಾ! ಒಂದೇ ದಿನ 1,215 ರೂ. ಏರಿಕೆಯಾಯ್ತು ಚಿನ್ನ

gold

ನವದೆಹಲಿ: ಚಿನ್ನದ ಬೆಲೆ ಏರುಗತಿಯಲ್ಲಿ ಸಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಿದ್ಯಾಮಾನಗಳಿಂದ ದೇಶೀಯ ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆಯಲ್ಲಿ ಏರಿಳಿತ ಕಾಣುತ್ತಿದ್ದು, ಕಳೆದೆರಡು ವಾರಗಳಿಂದ ಏರಿಳಿಕೆ ಕಾಣುತ್ತಿದ್ದ ಚಿನ್ನದ ಬೆಲೆ, ಒಂದೇ ದಿನದಲ್ಲಿ ಭಾರೀ ಏರಿಕೆ ಕಂಡಿದೆ.

ದೇಶೀಯ ಮಾರುಕಟ್ಟೆಯಲ್ಲಿ ಒಂದೇ ದಿನದಲ್ಲಿ 1,215 ರೂಪಾಯಿ ಹೆಚ್ಚಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಾಗಿ ಪ್ರತಿ 10 ಗ್ರಾಂ ಚಿನ್ನಕ್ಕೆ 30,885 ರೂಪಾಯಿಗೆ ತಲುಪಿದೆ. 2013ರಿಂದ ಆಗಸ್ಟ್ ತಿಂಗಳಿನಿಂದ ಇದುವರೆಗೆ ಅಂದರೆ, 26 ತಿಂಗಳ ನಂತರದಲ್ಲಿ ಚಿನ್ನದ ಬೆಲೆಯಲ್ಲಿ ಒಂದೇ ದಿನದಲ್ಲಿ ಗರಿಷ್ಟ ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿದೆ. ಬ್ರಿಟನ್ ಐರೋಪ್ಯ ಒಕ್ಕೂಟದಿಂದ ಹೊರಗೆ ಉಳಿಯಲು ಜನಮತಗಣನೆ ದೊರೆತ ಬೆನ್ನಲ್ಲಿಯೇ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದೆ.

ಇದರ ಪರಿಣಾಮ ದೇಶೀಯ ಮಾರುಕಟ್ಟೆಯ ಮೇಲೆಯೂ ಪ್ರಭಾವ ಬೀರಿದ್ದು, ಜಾಗತಿಕ ಚಿನ್ನದ ಮಾರುಕಟ್ಟೆಯಲ್ಲಿ 2014ರ ನಂತರ ಅತಿ ಹೆಚ್ಚು ಅಂದರೆ ಶೇ.8.1ರಷ್ಟು ಬೆಲೆ ಏರಿಕೆಯಾಗಿದೆ. 2008ರ ಬಳಿಕ ಒಂದೇ ದಿನದಲ್ಲಿ ಅತಿಹೆಚ್ಚು ಬೆಲೆ ಏರಿಕೆ ಕಂಡ ದರ ಇದಾಗಿದೆ. ಒಂದೇ ದಿನ 1,215 ರೂ. ಹೆಚ್ಚಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...