alex Certify
ಕನ್ನಡ ದುನಿಯಾ       Mobile App
       

Kannada Duniya

ಚಿನ್ನದ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ

gold j 29

ಮುಂಬೈ: ಕೆಲವು ದಿನಗಳಿಂದ ಏರುಗತಿಯಲ್ಲೇ ಇರುವ ಚಿನ್ನದ ಬೆಲೆ ಮತ್ತೆ ಏರಿಕೆ ಕಂಡಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನ 30,000 ರೂ. ಆಸುಪಾಸಿನಲ್ಲಿ ಇತ್ತು. ಇದೀಗ ಪ್ರತಿ 10 ಗ್ರಾಂ ಚಿನ್ನದ ಬೆಲೆ 31,000 ರೂ. ಗಡಿ ದಾಟಿದೆ.

ಹೂಡಿಕೆದಾರರು ಖರೀದಿ ಮೇಲೆ ಹೆಚ್ಚಿನ ಆಸಕ್ತಿ ತೋರಿದ ಪರಿಣಾಮ ಹಾಗೂ ಸಂಗ್ರಹಕಾರರು ಖರೀದಿಗೆ ಮುಗಿಬಿದ್ದಿದ್ದರಿಂದ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ ಎನ್ನಲಾಗಿದೆ. ಸ್ಟ್ಯಾಂಡರ್ಡ್ ಚಿನ್ನದ ಬೆಲೆ ಪ್ರತಿ 10 ಗ್ರಾಂ ಗೆ 315 ರೂಪಾಯಿ ಏರಿಕೆಯಾಗಿದ್ದು, 31,080 ರೂ. ತಲುಪಿದೆ. ಅದೇ ರೀತಿ ಅಪರಂಜಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿ 31,230 ರೂಪಾಯಿಗೆ ತಲುಪಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲಿಯೂ ಭಾರೀ ಏರಿಕೆಯಾಗಿದೆ.

ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 1410 ರೂ. ಹೆಚ್ಚಳವಾಗಿದೆ. ಪ್ರತಿ ಕೆ.ಜಿ.ಗೆ 1410 ರೂಪಾಯಿ ಏರಿಕೆಯಾಗಿದ್ದು, 48,000 ರೂಪಾಯಿಗೆ ತಲುಪಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆಯಾಗಬಹುದೆಂದು ಹೇಳಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಸ್ಥಿತಿಗತಿ ಆಧರಿಸಿ ದೇಶೀಯ ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...