alex Certify
ಕನ್ನಡ ದುನಿಯಾ       Mobile App
       

Kannada Duniya

ಖರೀದಿದಾರರನ್ನು ಚಿಂತೆಗೀಡು ಮಾಡಿದೆ ನಿರಂತರವಾಗಿ ಏರುತ್ತಿರುವ ಚಿನ್ನದ ಬೆಲೆ

ಶ್ರಾವಣದ ಬಳಿಕ ಜನತೆ ಗೌರಿ-ಗಣೇಶ ಹಬ್ಬವನ್ನು ಆಚರಿಸಿದ್ದು, ಮುಂಬರುವ ದಿನಗಳು ವಿವಾಹ ಸೇರಿದಂತೆ ಶುಭ ಸಮಾರಂಭಗಳಿಗೆ ಸೂಕ್ತವಾಗಿದೆ.

ಈ ಸಂದರ್ಭದಲ್ಲಿ ಚಿನ್ನ ಖರೀದಿಯೂ ಹೆಚ್ಚಾಗಲಿದ್ದು, ಆದರೆ ಮಾರುಕಟ್ಟೆಯಲ್ಲಿ ಚಿನ್ನದ ದರ ನಿರಂತರವಾಗಿ ಏರುತ್ತಿರುವುದು ಖರೀದಿದಾರರನ್ನು ಚಿಂತೆಗೀಡು ಮಾಡಿದೆ.

ಶುಕ್ರವಾರ ದೆಹಲಿಯಲ್ಲಿ ಚಿನ್ನದ ಬೆಲೆ ಮತ್ತೆ 50 ರೂಪಾಯಿ ಏರಿಕೆ ಕಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 31,700 ರೂಪಾಯಿಗೆ ಬಂದು ನಿಂತಿದೆ. ಇನ್ನು ಬೆಳ್ಳಿ ಬೆಲೆಯಲ್ಲಿ ಶುಕ್ರವಾರ ಇಳಿಕೆ ಕಂಡು ಬಂದಿದೆ. ಶುಕ್ರವಾರ ಬೆಳ್ಳಿ 20 ರೂಪಾಯಿ ಕುಸಿತ ಕಂಡಿದ್ದು, ಕೆ.ಜಿ. ಬೆಳ್ಳಿ 38,080 ರೂಪಾಯಿಯಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಹಾಗೂ ಭಾರತೀಯ ಮಾರುಕಟ್ಟೆಯಲ್ಲಿ ಆಭರಣ ತಯಾರಕರ ಖರೀದಿಯಿಂದಾಗಿ ಬೆಲೆ ಏರಿಕೆಯಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...