alex Certify
ಕನ್ನಡ ದುನಿಯಾ       Mobile App
       

Kannada Duniya

ಅಬ್ಬಾ! ಆಷಾಢದಲ್ಲೂ ಒಂದೇ ದಿನ 400 ರೂ. ಏರಿಕೆಯಾಯ್ತು ಚಿನ್ನ

gold 400

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲೇ ಸಾಗುತ್ತಿರುವ ಬಂಗಾರದ ಬೆಲೆ ಮತ್ತೆ ಹೆಚ್ಚಾಗಿದೆ. ಬುಧವಾರ ಒಂದೇ ದಿನ ಚಿನ್ನದ ದರದಲ್ಲಿ ಬರೋಬ್ಬರಿ 400 ರೂಪಾಯಿ ಏರಿಕೆಯಾಗಿದ್ದು, ಕಳೆದ 28 ತಿಂಗಳ ಅವಧಿಯಲ್ಲಿ ಗರಿಷ್ಠ ಮೊತ್ತ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳಿಂದ ದೇಶೀಯ ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆಯಲ್ಲಿ ಏರಿಳಿತವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಲೇ ಇರುವ ಚಿನ್ನದ ದರ ಬುಧವಾರ ಪ್ರತಿ 10 ಗ್ರಾಂಗೆ 400 ರೂ.ನಷ್ಟು ಹೆಚ್ಚಾಗಿದ್ದು, ಪ್ರತಿ 10 ಗ್ರಾಂ ಚಿನ್ನಕ್ಕೆ 31,050 ರೂಪಾಯಿ ಆಗಿದೆ. ಅದೇ ರೀತಿ ಬೆಳ್ಳಿಯ ಬೆಲೆಯಲ್ಲಿಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 750 ರೂಪಾಯಿ ಹೆಚ್ಚಳವಾಗಿದ್ದು, 47,000 ರೂ.ನಲ್ಲಿ ಕೊನೆಗೊಂಡಿದೆ ಎನ್ನಲಾಗಿದೆ.

ಯುರೋಪಿಯನ್ ಒಕ್ಕೂಟದಿಂದ ಬ್ರಿಟನ್ ಹೊರಬಂದಿದ್ದು ಮತ್ತು ಚಿನ್ನದ ಮೇಲೆ ಹೂಡಿಕೆ ಹೆಚ್ಚಾಗಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಆಷಾಢ ಮಾಸದಲ್ಲಿ ಸಾಮಾನ್ಯವಾಗಿ ಬಂಗಾರದ ಬೆಲೆ ಕಡಿಮೆಯಾಗುತ್ತದೆ ಎಂದುಕೊಂಡಿದ್ದವರಿಗೆ ನಿರಾಸೆಯಾಗಿದೆ. ಚಿನ್ನದ ಬೆಲೆ ಏರುಗತಿಯಲ್ಲಿ ಸಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...