alex Certify
ಕನ್ನಡ ದುನಿಯಾ       Mobile App
       

Kannada Duniya

9 ಲಕ್ಷ ರೂ. ಮೌಲ್ಯದ ಚಿನ್ನವನ್ನು ಈತ ಇಟ್ಟುಕೊಂಡಿದ್ದೆಲ್ಲಿ ಅಂತ ತಿಳಿದ್ರೆ ಶಾಕ್ ಅಗ್ತಿರಾ…!

ಹಣ ಗಳಿಕೆಗಾಗಿ ಕೆಲವರು ತಮ್ಮ ಜೀವವನ್ನೇ ಒತ್ತೆ ಇಡುತ್ತಾರೆ. ಹಣವೇ ಮುಖ್ಯವಾಗಿರುವ ಇವರುಗಳು, ಪ್ರಾಣವನ್ನೂ ಲೆಕ್ಕಿಸುವುದಿಲ್ಲ ಎಂಬುದಕ್ಕೆ ಈ ಘಟನೆಯೇ ತಾಜಾ ಉದಾಹರಣೆ.

ಒಡಿಶಾದ ಭುವನೇಶ್ವರ್ ನ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬ್ಯಾಂಕಾಕ್ ನಿಂದ ಬಂದಿಳಿದಿದ್ದ ಪ್ರಯಾಣಿಕನೊಬ್ಬನನ್ನು ತಪಾಸಣೆಗೊಳಪಡಿಸಿದ ವೇಳೆ, ಆತ ತನ್ನ ಗುದದ್ವಾರದಲ್ಲಿ 9 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನವನ್ನು ಅಡಗಿಸಿಟ್ಟುಕೊಂಡಿದ್ದು ಪತ್ತೆಯಾಗಿದೆ.

ದೆಹಲಿ ಮೂಲದ ಈ ಪ್ರಯಾಣಿಕ ಅಂದಾಜು 9,29,250 ರೂ. ಮೌಲ್ಯದ ಚಿನ್ನವನ್ನು ತನ್ನ ಗುದದ್ವಾರದಲ್ಲಿ ಅಡಗಿಸಿಟ್ಟುಕೊಂಡಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಆತನನ್ನು ಈಗ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...