alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಲಾಗಿದೆ.

ಕೇಂದ್ರ ಸರ್ಕಾರಿ ನೌಕರರು ಶಿಶುಪಾಲನಾ ರಜೆ(CCL –ಚೈಲ್ಡ್ ಕೇರ್ ಲೀವ್) ಅವಧಿಯಲ್ಲಿ ವಿದೇಶ ಪ್ರವಾಸವನ್ನು ಕೈಗೊಳ್ಳಬಹುದಾಗಿದೆ. ಶಿಶುಪಾಲನಾ ಅವಧಿಯಲ್ಲಿ ವಿದೇಶ ಪ್ರವಾಸಕ್ಕೆ ತೆರಳುವ ಕುರಿತು ಗೊಂದಲವಿದ್ದ ಕಾರಣ ಅನೇಕ ಇಲಾಖೆಗಳಿಂದ ಮಾಹಿತಿ ಕೇಳಲಾಗಿತ್ತು.

ಈ ಹಿನ್ನಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸ್ಪಷ್ಠೀಕರಣ ನೀಡಿದ್ದು, ಶಿಶುಪಾಲನಾ ರಜೆ ಅವಧಿಯಲ್ಲಿ ವಿದೇಶ ಪ್ರವಾಸ ಕೈಗೊಳ್ಳಬಹುದು. ಲೀವ್ ಟ್ರಾವೆಲ್ ಕನ್ಸೆಷನ್(LTC) ನಿಯಮದಂತೆ ಪ್ರಯಾಣದ ವೆಚ್ಚವನ್ನು ಪಡೆಯಬಹುದಾಗಿದೆ. ಇದಕ್ಕಾಗಿ ಹಿರಿಯ ಅಧಿಕಾರಿಗಳ ಅನುಮತಿ ಪಡೆಯಬೇಕಿದೆ ಎಂದು ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...