alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ ನೀಡಲಿದ್ದಾರಾ ಮೋದಿ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ತನ್ನ ನಾಲ್ಕು ವರ್ಷದ ಅಧಿಕಾರಾವಧಿಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ 5 ವಿವಿಧ ಉಡುಗೊರೆಯನ್ನು ನೀಡಿದೆ. ಇನ್ನೊಂದು ದೊಡ್ಡ ಉಡುಗೊರೆಯನ್ನು ಮೋದಿ ಸರ್ಕಾರ ಶೀಘ್ರವೇ ನೀಡುವ ಸಾಧ್ಯತೆ ಹೆಚ್ಚಿದೆ.

ಕೇಂದ್ರ ಸರ್ಕಾರ ಆಗಸ್ಟ್ 15,2018 ರಂದು ಎರಡು ದೊಡ್ಡ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ. 7ನೇ ವೇತನ ಆಯೋಗದ ಬಹು ನಿರೀಕ್ಷಿತ ಶಿಫಾರಸ್ಸುಗಳಿಗೆ ಮೋದಿ ತಂಡ ಒಪ್ಪಿಗೆ ನೀಡುವ ಸಾಧ್ಯತೆಯಿದೆ. ಹಾಗೆಯೇ ನಿವೃತ್ತಿ ವಯಸ್ಸನ್ನು 60 ರಿಂದ 62ಕ್ಕೆ ಏರಿಸುವ ಸಂಭವವಿದೆ. ಸುಮಾರು 1 ಕೋಟಿ ಸರ್ಕಾರಿ ನೌಕರರು ಇದ್ರ ಲಾಭ ಪಡೆಯಲಿದ್ದಾರೆ.

ಈ ಟ್ರಂಪ್ ಕಾರ್ಡನ್ನು ಮೋದಿ ಸರ್ಕಾರ ಇಲ್ಲಿಯವರೆಗೆ ರಕ್ಷಿಸಿಕೊಂಡು ಬಂದಿತ್ತು. ಈ ಎರಡು ಮಹತ್ವದ ಘೋಷಣೆಗಳಾದಲ್ಲಿ ಅದ್ರ ಪರಿಣಾಮವನ್ನು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ನೋಡಬಹುದಾಗಿದೆ.

2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದ್ರೆ ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ಇದಕ್ಕೆ ಮೋದಿ ಸರ್ಕಾರ ಒಲ್ಲೆ ಎಂದಿತ್ತು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...