alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್! ಒಂದೂವರೆ ಪಟ್ಟು ಹೆಚ್ಚಾಗಲಿದೆ ಕೃಷಿ ‘ಬೆಂಬಲ ಬೆಲೆ’

ನವದೆಹಲಿ: ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಆದ್ಯತೆ ನೀಡಲಾಗಿದೆ.

ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ನಲ್ಲಿ ಗ್ರಾಮೀಣ ಆರ್ಥಿಕತೆ ಬೆಳವಣಿಗೆ ಮತ್ತು ಕೃಷಿ ಉತ್ಪನ್ನಗಳ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಿದ್ದು, ಹಿಂಗಾರು ಬೆಳೆಗಳಿಗೆ ಉತ್ಪನ್ನ ವೆಚ್ಚದ ಒಂದೂವರೆ ಪಟ್ಟು ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡುವ ಭರವಸೆಯನ್ನು ನೀಡಲಾಗಿದೆ.

ರಾಜ್ಯಗಳು ಹಾಗೂ ನೀತಿ ಆಯೋಗದೊಂದಿಗೆ ಸಮಾಲೋಚನೆ ನಡೆಸಿ ಕೃಷಿ ಉತ್ಪನ್ನಗಳ ಬೆಲೆ ಕುಸಿತದ ಸಂದರ್ಭದಲ್ಲಿ ಸೂಕ್ತವಾದ ಸಂಭಾವನೆ ನೀಡುವುದಾಗಿ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ಇದರೊಂದಿಗೆ ಕೃಷಿ ಸಾಲ ನೀಡಿಕೆ ಮೊತ್ತವನ್ನು 11 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ನೀರಾವರಿ ಇಲ್ಲದ ಜಿಲ್ಲೆಗಳಿಗೆ ಪರ್ಯಾಯ ನೀರಾವರಿ ಸೌಲಭ್ಯ ಕಲ್ಪಿಸಲು 2,600 ಕೋಟಿ ರೂ. ಮೀಸಲಿಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...