alex Certify
ಕನ್ನಡ ದುನಿಯಾ       Mobile App
       

Kannada Duniya

ರಸ್ತೆ ಅಪಘಾತ ತಡೆಗೆ 12 ಸಾವಿರ ಕೋಟಿ ಹೂಡಿಕೆ

ದೇಶದಲ್ಲಿ ರಸ್ತೆ ಅಪಘಾತದ ಸಂಖ್ಯೆ ಹೆಚ್ಚಾಗ್ತಿದೆ. ದೇಶದಲ್ಲಾಗ್ತಿರುವ ರಸ್ತೆ ಅಪಘಾತವನ್ನು ಶೇಕಡಾ 50ರಷ್ಟು ಕಡಿಮೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ದೇಶದ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಅಪಘಾತ ತಡೆಗೆ ಅನುಕೂಲವಾಗುವಂತಹ ರಸ್ತೆ ನಿರ್ಮಾಣಕ್ಕೆ ನೆರವಾಗುವಂತೆ ಅಭಿವೃದ್ಧಿಶೀಲ ದೇಶಗಳ ಜೊತೆ ಮಾತುಕತೆ ನಡೆಸಿದ್ದೇವೆಂದು ಗಡ್ಕರಿ ಹೇಳಿದ್ದಾರೆ.

ರಸ್ತೆ ಸುರಕ್ಷತೆಗೆ ಹೊಸ ತಂತ್ರಜ್ಞಾನಗಳನ್ನು ಹುಡುಕಲಾಗ್ತಿದೆ. ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ 780ಕ್ಕೂ ಹೆಚ್ಚು ಜಾಗಗಳನ್ನು ಗುರುತಿಸಲಾಗಿದೆ. ಮುಂದಿನ ಎರಡು ವರ್ಷದಲ್ಲಿ 12 ಸಾವಿರ ಕೋಟಿ ಹೂಡಿಕೆ ಮಾಡಿ ರಸ್ತೆ ಸುಧಾರಣೆ ಮಾಡುವುದಾಗಿ ಅವರು ಹೇಳಿದ್ದಾರೆ.

ಸಚಿವಾಲಯದ ಬಳಿ ರಸ್ತೆ ಪುನರುಜ್ಜೀವನಕ್ಕೆ ಸಂಬಂಧಿಸಿದಂತೆ ಪ್ರಮುಖ ಯೋಜನೆಗಳಿವೆ. ಮುಂದಿನ ವರ್ಷ ಸರ್ಕಾರ ಪ್ರತಿ ದಿನ 40 ಕಿಲೋಮೀಟರ್ ರಸ್ತೆ ನಿರ್ಮಾಣದ ಗುರಿ ಹೊಂದಿದೆ ಎಂದು ಗಡ್ಕರಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...