alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರತಿ ಮನೆಗೆ 5 LED ಬಲ್ಬ್, ಬ್ಯಾಟರಿ, ಫ್ಯಾನ್

ನವದೆಹಲಿ: ವಸಂತ್ ಕುಂಜ್ ನ ನೆಲ್ಸನ್ ಮಂಡೇಲಾ ಮಾರ್ಗದಲ್ಲಿ ಇಂಧನ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೀನ್ ದಯಾಳ್ ವಿದ್ಯುತ್ ಭವನ(ONGC ಕಾರ್ಪೋರೇಟ್ ಕಚೇರಿ) ಲೋಕಾರ್ಪಣೆ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಪ್ರತಿ ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ‘ಸೌಭಾಗ್ಯ ಯೋಜನೆ’ಗೆ ಚಾಲನೆ ನೀಡಿದ್ದಾರೆ.

ಈ ಯೋಜನೆಯಡಿ ಎಲ್ಲಾ ಬಡವರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಪ್ರತಿ ಮನೆಗೆ 5 LED ಬಲ್ಬ್, ಬ್ಯಾಟರಿ, ಫ್ಯಾನ್ ನೀಡಲಾಗುವುದು. 16,320 ಕೋಟಿ ರೂ.ಗಳನ್ನು ಇದಕ್ಕಾಗಿ ಮೀಸಲಿಡಲಾಗಿದೆ. ಕೇಂದ್ರ ಸರ್ಕಾರ ಶೇ. 60 ರಷ್ಟು, ರಾಜ್ಯ ಸರ್ಕಾರ ಶೇ. 30 ರಷ್ಟು ಮೊತ್ತವನ್ನು ಭರಿಸಲಿದ್ದು, ಶೇ. 10 ರಷ್ಟು ಮೊತ್ತವನ್ನು ಸಾಲದ ರೂಪದಲ್ಲಿ ನೀಡಲಾಗುವುದು.

ಸಾಲವನ್ನು 500 ರೂ. ಮಾಸಿಕ ಕಂತುಗಳಲ್ಲಿ 10 ತಿಂಗಳು ಪಾವತಿಸಬೇಕಿದೆ. ಬಿ.ಪಿ.ಎಲ್. ಕುಟುಂಬಗಳಿಗೆ ಉಚಿತವಾಗಿ ಸಂಪರ್ಕ ನೀಡಲಾಗುವುದು.

ಅಲ್ಲದೇ, ಸೌಭಾಗ್ಯ ಯೋಜನೆ ಉದ್ಯೋಗಾವಕಾಶ ಹೆಚ್ಚಳ, ರಕ್ಷಣೆ, ಆರೋಗ್ಯ, ಶಿಕ್ಷಣ ಹಾಗೂ ಸಂಪರ್ಕ ಕ್ಷೇತ್ರಗಳ ಅಭಿವೃದ್ಧಿ ಮೊದಲಾದವುಗಳನ್ನು ಒಳಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...