alex Certify
ಕನ್ನಡ ದುನಿಯಾ       Mobile App
       

Kannada Duniya

ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ಕೇಂದ್ರ ಸರ್ಕಾರ ಹೇಳಿದ್ದೇನು?

ಪುಟ್ಟ ಮಕ್ಕಳು ಹಾಗೂ ಅಪ್ರಾಪ್ತರ ಮೇಲೆ ಅತ್ಯಾಚಾರವೆಸಗುವ ಕಾಮುಕರಿಗೆ ಮರಣದಂಡನೆ ವಿಧಿಸಬೇಕೆಂಬ ಒತ್ತಾಯ ದೇಶದಾದ್ಯಂತ ಕೇಳಿಬರುತ್ತಿರುವ ಮಧ್ಯೆ ಕೇಂದ್ರ ಸರ್ಕಾರ ನ್ಯಾಯಾಲಯದಲ್ಲಿ ತನ್ನ ಅಭಿಪ್ರಾಯ ಹೇಳಿದೆ.

ವಕೀಲ ಅಲೋಕ್ ಶ್ರೀವಾತ್ಸವ್ ಎಂಬುವವರು ಮಕ್ಕಳ ಮೇಲೆ ಅತ್ಯಾಚಾರ ಎಸುಗುವವರಿಗೆ ಮರಣದಂಡನೆ ವಿಧಿಸುವ ಕಾನೂನು ಜಾರಿಗೊಳಿಸಲು ನಿರ್ದೇಶನ ನೀಡಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ, ಕೇಂದ್ರ ಸರ್ಕಾರದ ನಿಲುವನ್ನು ತಿಳಿಸಿದ್ದಾರೆ.

ಅತ್ಯಾಚಾರಿಗಳಿಗೆ ಶಿಕ್ಷೆ ವಿಧಿಸುವ ಕುರಿತು ಈಗಾಗಲೇ ಕಠಿಣ ಕಾನೂನುಗಳಿದ್ದು, ಈ ಅಪರಾಧಕ್ಕೆ ಮರಣದಂಡನೆ ವಿಧಿಸುವುದು ಪರಿಹಾರವಲ್ಲವೆಂದು ಹೇಳಿದ್ದಾರೆ. ಇತ್ತೀಚೆಗಷ್ಟೆ ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ ವಿಧಿಸುವ ಕಾನೂನನ್ನು ತಂದಿದ್ದು, ಇದೇ ಕಾನೂನನ್ನು ದೇಶಕ್ಕೆ ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...