alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಸ್ಪೋರ್ಟ್ ಮಾಡಿಸುವವರಿಗೊಂದು ‘ಗುಡ್ ನ್ಯೂಸ್’

ಕುಗ್ರಾಮಗಳಲ್ಲಿ ವಾಸವಾಗಿರುವ ಜನರಿಗೂ ಪಾಸ್ಪೋರ್ಟ್ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಶತಾಯ ಗತಾಯ ಪ್ರಯತ್ನ ಮಾಡ್ತಿದೆ. ಪೋಸ್ಟ್ ಆಫೀಸ್ ಪಾಸ್ಪೋರ್ಟ್ ಸೇವಾ ಕೇಂದ್ರಕ್ಕೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಚಾಲನೆ ನೀಡಿದ್ದಾರೆ.

ಪಾಸ್ಪೋರ್ಟ್ ಸೇವಾ ಪ್ರಕ್ರಿಯೆಯನ್ನು ಸಂಪೂರ್ಣ ಸರಳಗೊಳಿಸಲು ಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ. ಅರ್ಜಿಗಳನ್ನು ವೇಗವಾಗಿ ಪರಿಷ್ಕರಣೆ ಮಾಡಿ, ಪಾರದರ್ಶಕವಾಗಿ ಎಲ್ಲಾ ಪ್ರಕ್ರಿಯೆಗಳನ್ನು ಕೈಗೊಳ್ಳುವುದು ಸರ್ಕಾರದ ಉದ್ದೇಶ ಅಂತಾ ಹೇಳಿದ್ದಾರೆ.

8 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಹಾಗೂ ಹಿರಿಯ ನಾಗರಿಕರ ಪಾಸ್ಪೋರ್ಟ್ ಅರ್ಜಿ ಶುಲ್ಕದಲ್ಲಿ ಸರ್ಕಾರ ಶೇ.10ರಷ್ಟು ಕಡಿತ ಮಾಡಿದೆ. ಪಾಸ್ಪೋರ್ಟ್ ಸೇವಾ ಕೇಂದ್ರಗಳಲ್ಲಿ ಕಳೆದ ವರ್ಷ ಶೇ.19ರಷ್ಟು ಅಧಿಕ ಪಾಸ್ಪೋರ್ಟ್ ಅರ್ಜಿಗಳನ್ನು ವಿಲೇವಾರಿ ಮಾಡಿರೋದಾಗಿ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...