alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಕೆ ಮಾಡಿದ್ರೆ ಕಠಿಣ ಕ್ರಮ: ಕೇಂದ್ರದ ಎಚ್ಚರಿಕೆ

ನವದೆಹಲಿ: ನಾಳೆ 72ನೇ ಸ್ವಾತಂತ್ರ್ಯ ದಿನಾಚರಣೆ. ಈ ಹಿನ್ನಲೆಯಲ್ಲಿ ಪ್ಲಾಸ್ಟಿಕ್ ರಾಷ್ಟ್ರ ಧ್ವಜವನ್ನು ಬಳಕೆ ಮಾಡದಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿರುವ ಕೇಂದ್ರ ಸರ್ಕಾರ, ಒಂದೊಮ್ಮೆ ಪ್ಲಾಸ್ಟಿಕ್ ಧ್ವಜ ಬಳಕೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

ಸ್ವಾತಂತ್ರ್ಯ ದಿನದ ಸಂಭ್ರಮದ ನೆಪದಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜ ಗಳನ್ನು ಎಲ್ಲೆಂದರಲ್ಲಿ ಬಳಸಿ ಅದನ್ನು ಬಿಸಾಡಿ ರಾಷ್ಟ್ರಧ್ವಜಕ್ಕೆ ಅಗೌರವ ನೀಡಲಾಗುತ್ತಿದೆ. ಅಲ್ಲದೇ ಬೀದಿ ಬೀದಿಗಳಲ್ಲಿ, ಅಂಗಡಿ ಮುಗ್ಗಟ್ಟುಗಳಲ್ಲಿ, ವಾಹನಗಳ ಮೇಲೆ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳನ್ನು ಹಾಕಿ ಬಳಿಕ ಅದನ್ನು ಎಸೆಯಲಾಗುತ್ತದೆ. ಜನತೆಯ ಭರವಸೆ ಹಾಗೂ ಆಕಾಂಕ್ಷೆಯ ಪ್ರತೀಕವಾಗಿರುವ ರಾಷ್ಟ್ರಧ್ವಜಕ್ಕೆ ಈ ರೀತಿ ಅಗೌರವ ತೋರುವುದನ್ನು ತಡೆಗಟ್ಟಲು ಹಾಗೂ ಪ್ಲಾಸ್ಟಿಕ್ ಧ್ವಜಗಳು ಜೈವಿಕವಾಗಿ ವಿಫಟಿತವಾಗುವುದಿಲ್ಲವಾದ್ದರಿಂದ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಆದೇಶ ನೀಡಿದೆ.

ಪ್ಲಾಸ್ಟಿಕ್ ಧ್ವಜಗಳ ಮಾರಾಟ, ಧ್ವಜಗಳ ಸಂಗ್ರಹ 2002 ರ ಭಾರತದ ಧ್ವಜ ನೀತಿಗೆ ವಿರುದ್ಧವಾಗಿದೆ. ರಾಷ್ಟ್ರಧ್ವಜ ಪ್ರದರ್ಶನ ಕುರಿತಂತೆ ಇರುವ ಕಾನೂನು, ನೀತಿಗಳ ಬಗ್ಗೆ ಜನರಿಗೆ, ಸಂಘಟನೆಗಳಿಗೆ ಹಾಗೂ ಸಂಸ್ಥೆಗಳಿಗೆ ಅರಿವು ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ಜಾಗೃತಿ ಮೂಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...