alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಸಭಾ ಉಪ ಸಭಾಪತಿ ಸ್ಥಾನಕ್ಕೆ ಜೆಡಿಯು ಅಭ್ಯರ್ಥಿ ಆಯ್ಕೆಗೆ ಸರ್ಕಾರದ ಒಲವು

ನವದೆಹಲಿ: ರಾಜ್ಯಸಭೆಯ ಉಪ ಸಭಾಧ್ಯಕ್ಷರನ್ನಾಗಿ ಜನತಾ ದಳ(ಸಂಯುಕ್ತ)ದ ಹರಿವಂಶ್‌ ನಾರಾಯಣ್‌ ಸಿಂಗ್‌ ಅವರನ್ನು ಆಯ್ಕೆ ಮಾಡಲು ಚಿಂತನೆ ನಡೆದಿದೆ.

ರಾಜ್ಯಸಭೆಯ ಉಪ ಸಭಾಧ್ಯಕ್ಷ ಸ್ಥಾನಕ್ಕೆ ಅ.9 ರಂದು 11ಗಂಟೆಗೆ ಚುನಾವಣೆ ನಡೆಸುವುದಾಗಿ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಘೋಷಣೆ ಮಾಡಿದ್ದಾರೆ. ಆ.10 ರ ವರೆಗೆ ಮುಂಗಾರು ಅಧಿವೇಶನ ನಡೆಯಲಿದ್ದು, ಇದಕ್ಕೆ ಮುನ್ನ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಉಪ ಸಭಾಪತಿ ಸ್ಥಾನಕ್ಕೆ ಒಮ್ಮತ ಆಯ್ಕೆ ಉತ್ತಮ. ಆದರೆ ವಿರೋಧ ಪಕ್ಷ ತಮ್ಮ ಆಕ್ಷೇಪ ವ್ಯಕ್ತಪಡಿಸಿದರೆ, ಚುನಾವಣೆ ಅನಿವಾರ್ಯವಾಗಲಿದೆ. ಮೂಲಗಳ ಪ್ರಕಾರ ತೃಣಮೂಲ ಕಾಂಗ್ರೆಸ್‌ನ ಸುಖೇಂದು ಶೇಖರ್‌ ರಾಯ್‌ ಉಪಸಭಾಪತಿ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ಉಪ ಸಭಾಪತಿ ಸ್ಥಾನಕ್ಕೆ ವಿರೋಧ ಪಕ್ಷದಿಂದಲೇ ಆಯ್ಕೆಯಾಗಬೇಕು. ಕಾಂಗ್ರೆಸ್‌ನಿಂದ ಈವರೆಗೆ ಯಾವುದೇ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿಲ್ಲ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಗುಲಾಂ ನಬಿ ಆಜಾದ್‌ ಹೇಳಿಕೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...