alex Certify
ಕನ್ನಡ ದುನಿಯಾ       Mobile App
       

Kannada Duniya

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಾಮುಕನಿಗೆ ಥಳಿತ

ಗ್ರೇಟರ್ ನೋಯ್ಡಾ: ನೀಚ ಕೃತ್ಯ ಎಸಗುವಾಗಲೇ ಸಿಕ್ಕಿ ಬಿದ್ದ ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.

ಸೇಲ್ಸ್ ಟ್ಯಾಕ್ಸ್ ಡಿಪಾರ್ಟ್ ಮೆಂಟ್ ಪೊಲೀಸ್ ಒಬ್ಬ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಆಕ್ರೋಶಗೊಂಡ ಸಾರ್ವಜನಿಕರು ಥಳಿಸಿದ್ದಾರೆ.  ಉತ್ತರ ಪ್ರದೇಶದ 45 ವರ್ಷದ ಸುಭಾಷ್ ಸಿಂಗ್ ಹಲ್ಲೆಗೊಳಗಾಗಿ ಪೊಲೀಸರ ಅತಿಥಿಯಾಗಿದ್ದಾನೆ.

ಗ್ರೇಟರ್ ನೋಯ್ಡಾದ ಗೌತಮ ಬುದ್ಧ ನಗರದಲ್ಲಿ ಕೆಲಸ ಮಾಡುತ್ತಿದ್ದ ಸುಭಾಷ್ ಸರ್ಜಾಪುರದಲ್ಲಿ ಮನೆ ಮಾಡಿದ್ದಾನೆ. ತನ್ನ ಮನೆಯ ಸಮೀಪದಲ್ಲಿ ಆಟವಾಡುತ್ತಿದ್ದ 7 ವರ್ಷದ ಬಾಲಕಿಯನ್ನು ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ಬಾಲಕಿ ಕಿರುಚಾಡಿದಾಗ ಇಬ್ಬರು ಮಹಿಳೆಯರು ಸ್ಥಳಕ್ಕೆ ಧಾವಿಸಿ ಆತನಿಗೆ ಬೈದಾಡಿದ್ದಾರೆ. ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಸುಭಾಷ್ ಅಲ್ಲಿಂದ ಪರಾರಿಯಾಗಿದ್ದಾನೆ. ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಮಹಿಳೆಯರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಸುಭಾಷ್ ಬೆಳಗಿನ ಜಾವ ಮನೆಗೆ ಬಂದ ಸಂದರ್ಭದಲ್ಲಿ ಸ್ಥಳೀಯರೆಲ್ಲಾ ಸೇರಿ ಥಳಿಸಿದ್ದಾರೆ.

ಸರ್ಜಾಪುರ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...