alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ರಾಹಕರನ್ನು ಚದುರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಗಾರ್ಡ್

bank_759ನವೆಂಬರ್ 8 ರಿಂದ 500 ಹಾಗೂ 1000 ರೂ. ಮುಖಬೆಲೆಯ ನೋಟುಗಳು ರದ್ದುಗೊಂಡ ಬಳಿಕ ಹಣ ಬದಲಾವಣೆಗೆ ಹಾಗೂ ಹಣ ಪಡೆಯಲು ಬ್ಯಾಂಕ್ ಹಾಗೂ ಎಟಿಎಂಗಳ ಮುಂದೆ ಸಾರ್ವಜನಿಕರು ಸಾಲುಗಟ್ಟಿ ನಿಲ್ಲುತ್ತಿರುವುದು ಸಾಮಾನ್ಯವಾಗಿದೆ.

ಬ್ಯಾಂಕ್ ಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಹಣ ಬರುತ್ತಿಲ್ಲವಾದ ಕಾರಣ ಕೆಲವೆಡೆ ಗ್ರಾಹಕರು, ಸರ್ಕಾರ ನಿಗದಿಪಡಿಸಿರುವ ಮೊತ್ತದಷ್ಟು ಹಣ ಪಡೆಯಲು ಮುಂದಾದರೂ ಅದನ್ನು ವಿತರಿಸಲಾಗದ ಪರಿಸ್ಥಿತಿಯಲ್ಲಿ ಬ್ಯಾಂಕ್ ಅಧಿಕಾರಿಗಳಿದ್ದಾರೆ.

ಪಂಜಾಬ್ ನ ಮಾನ್ಸಾ ಜಿಲ್ಲೆಯ ಬುದ್ಲಾದಾದಲ್ಲಿನ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಗೆ ಹಣ ಪಡೆಯಲು ಬಂದಿದ್ದ ಗ್ರಾಹಕರು ಕ್ಯೂನಲ್ಲಿ ನಿಂತು ಕಾದು ಕಾದು ಸುಸ್ತಾಗಿ ಬ್ಯಾಂಕ್ ಒಳಗೆ ನುಗ್ಗಲು ಯತ್ನಿಸಿದಾಗ ಬ್ಯಾಂಕ್ ಮುಂದೆ ಭದ್ರತೆಗಾಗಿ ನಿಯೋಜಿತನಾಗಿದ್ದ ಗಾರ್ಡ್, ಗಾಳಿಯಲ್ಲಿ ಮೂರು ಬಾರಿ ಗುಂಡು ಹಾರಿಸಿ ಗುಂಪನ್ನು ಚದುರಿಸಿದ ಘಟನೆ ನಡೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ಅಧಿಕಾರಿಗಳು ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲವಾದ ಕಾರಣ ಗಾರ್ಡ್ ವಿರುದ್ದ ಪ್ರಕರಣ ದಾಖಲಿಸುವುದಿಲ್ಲವೆಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...