alex Certify
ಕನ್ನಡ ದುನಿಯಾ       Mobile App
       

Kannada Duniya

ಗುಜರಾತ್ ಚುನಾವಣೆ : ಮೋದಿ ಪ್ರಚಾರ ಯುದ್ಧಕ್ಕೆ ಮುಹೂರ್ತ ಫಿಕ್ಸ್

ಗುಜರಾತ್ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದೆ. ಬಿಜೆಪಿ –ಕಾಂಗ್ರೆಸ್ ಜಿದ್ದಾಜಿದ್ದಿ ಕಣವಾಗಿ ಗುಜರಾತ್ ಮಾರ್ಪಟ್ಟಿದೆ. ಬಿಜೆಪಿ ಭದ್ರಕೋಟೆಯಾಗಿದ್ದ ಗುಜರಾತ್ ವಿಧಾನಸಭೆಯನ್ನು ಕೈವಶ ಮಾಡಿಕೊಳ್ಳಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಣತೊಟ್ಟಿದ್ದಾರೆ. ಇದು ಬಿಜೆಪಿಗೆ ಸ್ವಲ್ಪ ಹಿನ್ನೆಡೆಯುಂಟು ಮಾಡ್ತಿದೆ.

ಗುಜರಾತ್ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಗೆಲುವಿನ ಭಾರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಗಲಿಗೇರಿಸಿದೆ. ತವರು ವಿಧಾನಸಭೆಯಲ್ಲಿ ಬಿಜೆಪಿಗೆ ಗೆಲುವು ತಂದುಕೊಡುವ ಹೊಣೆ ಮೋದಿ ಬೆನ್ನೇರಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ನವೆಂಬರ್ 27ರಂದು ಗುಜರಾತ್ ಪ್ರಚಾರ ಕಣಕ್ಕೆ ಧುಮುಕಲಿದ್ದಾರೆ. ಐದು ದಿನ ಗುಜರಾತ್ ನಲ್ಲಿರುವ ಮೋದಿ 17 ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನ ಮಂತ್ರಿಯಾಗಿ ದೇಶಕ್ಕೆ ನೀಡಿದ ಕೊಡುಗೆಗಳನ್ನು ಸಾರ್ವಜನಿಕ ಪ್ರಚಾರದಲ್ಲಿ ಮತದಾರರ ಮುಂದಿಟ್ಟು ಮೋದಿ ಮತಯಾಚನೆ ಮಾಡಲಿದ್ದಾರೆ. 13 ವರ್ಷಗಳ ಕಾಲ ಗುಜರಾತ್ ಸಿಂಹಾಸನದ ಮೇಲೆ ಕುಳಿತಿದ್ದ ಮೋದಿಗೆ ಈ ಬಾರಿಯ ಗೆಲುವು ಪ್ರತಿಷ್ಠೆಯ ವಿಷ್ಯವಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...