alex Certify
ಕನ್ನಡ ದುನಿಯಾ       Mobile App
       

Kannada Duniya

ಗುಜರಾತ್ ಚುನಾವಣೆಗೆ ನಾಳೆ ಮುಹೂರ್ತ ನಿಗದಿ

ನವದೆಹಲಿ: ದೇಶದ ಗಮನಸೆಳೆದಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಕೇಂದ್ರ ಚುನಾವಣಾ ಆಯೋಗ ನಾಳೆ ಅಧಿಕೃತ ಘೋಷಣೆ ಹೊರಡಿಸಲಿದೆ.

ಗುಜಾರಾತ್ ನಲ್ಲಿ ಚುನಾವಣೆ ಘೋಷಿಸಲು ಆಯೋಗ ವಿಳಂಬ ನೀತಿ ಅನುಸರಿಸುತ್ತಿದೆ. ಪ್ರಧಾನಿಯವರ ಅನುಮತಿಗಾಗಿ ಕಾಯುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿತ್ತು.

ಹಿಮಾಚಲ ಪ್ರದೇಶ ಮತ್ತು ಗುಜರಾತ್ ನಲ್ಲಿ ಏಕಕಾಲಕ್ಕೆ ಚುನಾವಣೆ ಘೋಷಣೆ ಮಾಡುವ ನಿರೀಕ್ಷೆ ಇತ್ತಾದರೂ, ಬಿ.ಜೆ.ಪಿ. ಮನವಿ ಮೇರೆಗೆ ಆಯೋಗ ಘೋಷಣೆಯನ್ನು ಮುಂದೂಡಿದೆ ಎನ್ನಲಾಗಿತ್ತು.

ಈಗಾಗಲೇ ಗುಜರಾತ್ ನಲ್ಲಿ ಚುನಾವಣೆ ಕಾವು ಏರತೊಡಗಿದ್ದು, ಪಕ್ಷಾಂತರ ಪರ್ವ ಆರಂಭವಾಗಿದೆ. ಆರೋಪ, ಪ್ರತ್ಯಾರೋಪಗಳನ್ನು ಮಾಡಲಾಗ್ತಿದೆ.

ಈ ಬೆಳವಣಿಗೆಗಳ ನಡುವೆ ಕೇಂದ್ರ ಚುನಾವಣಾ ಆಯೋಗ ನಾಳೆ ಚುನಾವಣೆಯನ್ನು ಘೋಷಣೆ ಮಾಡಲಿದೆ. ಡಿಸೆಂಬರ್ 10 ಮತ್ತು 14 ರಂದು 2 ಹಂತಗಳಲ್ಲಿ ಗುಜರಾತ್ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...