alex Certify
ಕನ್ನಡ ದುನಿಯಾ       Mobile App
       

Kannada Duniya

ಅಧಿಕೃತ ಪಟ್ಟಿಗೂ ಮುನ್ನವೇ ಹರಿದಾಡ್ತಿತ್ತು ನಕಲಿ ಪಟ್ಟಿ

ಗುಜರಾತ್ ವಿಧಾನಸಭೆ ಚುನಾವಣೆಗೆ ತಯಾರಿ ಜೋರಾಗಿ ಸಾಗಿದೆ. ಬಿಜೆಪಿ-ಕಾಂಗ್ರೆಸ್ ಹಗ್ಗಜಗ್ಗಾಟ ಕೂಡ ಮುಂದುವರೆದಿದೆ. ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ 76 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಸಂಜೆ ಬಿಡುಗಡೆ ಮಾಡಿದೆ.

ಭಾನುವಾರ ಬೆಳಿಗ್ಗೆ ಮಾಧ್ಯಮಗಳಲ್ಲಿ ಕಾಂಗ್ರೆಸ್ ನ ನಕಲಿ ಪಟ್ಟಿಯೊಂದು ಹರಿದಾಡ್ತಿತ್ತು. ಇದ್ರಿಂದ ಎಚ್ಚೆತ್ತ ಕಾಂಗ್ರೆಸ್ ಅಸಲಿ ಪಟ್ಟಿಯೊಂದಿಗೆ ಸಂಜೆ ಮಾಧ್ಯಮಗಳ ಮುಂದೆ ಬಂದಿದೆ. ಮಾಧ್ಯಮಗಳ ಮುಂದೆ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ನಕಲಿ ಪಟ್ಟಿಗೆ ಬಿಜೆಪಿಯನ್ನು ಹೊಣೆ ಮಾಡಿದೆ. ಗುಜರಾತಿನಲ್ಲಿ ಬಿಜೆಪಿ ಸೋಲು ಖಚಿತವಾಗಿದೆ. ಹಾಗಾಗಿ ಬಿಜೆಪಿ ಇಂಥ ಕೆಲಸಗಳನ್ನು ಮಾಡ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ಪಟ್ಟಿ ಬಿಡುಗಡೆಗೂ ಮುನ್ನ ಕಾಂಗ್ರೆಸ್ ಹಾಗೂ ಪಿಎಎಎಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ ಎನ್ನಲಾಗ್ತಿದೆ. ಪಿಎಎಎಸ್ ಮುಖಂಡ ದಿನೇಶ್ ಭಾಮ್ಡಿಯಾ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವೇಳೆ ತನ್ನನ್ನು ಪರಿಗಣಿಸಿಲ್ಲವೆಂದು ದೂರಿದ್ದಾರೆ. ಸೂರತ್ ನಲ್ಲಿ ಇದೇ ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪಿಎಎಎಸ್ ಅಭ್ಯರ್ಥಿಗಳು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...