alex Certify
ಕನ್ನಡ ದುನಿಯಾ       Mobile App
       

Kannada Duniya

ಈರುಳ್ಳಿ ತಿನ್ನಿಸಿದ್ದಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ ಮಹಿಳೆ…!

ಗುಜರಾತಿನ ಮೆಹ್ಸಾನಾದಲ್ಲಿ ವಿಲಕ್ಷಣ ಪ್ರಕರಣವೊಂದು ನಡೆದಿದೆ. ತನಗೆ ಪತಿ ಹಾಗೂ ಆತನ ತಾಯಿ ಬಲವಂತವಾಗಿ ಈರುಳ್ಳಿ, ಬೆಳ್ಳುಳ್ಳಿ ತಿನ್ನಿಸಿದ್ದಾರೆ ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಈ ಮಹಿಳೆ ತನ್ನ ಸಹೋದರನ ಸ್ನೇಹಿತನನ್ನು ಪ್ರೀತಿಸಿ ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದು, ಪಟೇಲ್ ಸಮುದಾಯಕ್ಕೆ ಸೇರಿದ ಈಕೆ ಸ್ವಾಮಿ ನಾರಾಯಣ ಪಂಥದ ಅನುಯಾಯಿ ಎನ್ನಲಾಗಿದೆ.

ನಾವು ಈರುಳ್ಳಿ, ಬೆಳ್ಳುಳ್ಳಿಯನ್ನು ತಿನ್ನುವುದಿಲ್ಲ. ಆದರೆ ಪತಿ ಮನೆಯಲ್ಲಿ ಇದನ್ನು ತಿನ್ನಲು ಬಲವಂತಪಡಿಸುತ್ತಾರೆ. ನಿರಾಕರಿಸಿದ ವೇಳೆ ನನ್ನ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಗ ತನಿಖೆಗೆ ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...