alex Certify
ಕನ್ನಡ ದುನಿಯಾ       Mobile App
       

Kannada Duniya

ಮಲ್ಲಿಕಾರ್ಜುನ ಸ್ವಾಮಿ ಸನ್ನಿಧಿಯಲ್ಲಿ ಭಕ್ತರ ತಲೆಗೂದಲಿಗೆ ಕನ್ನ..!

hair

ಆಂಧ್ರಪ್ರದೇಶದ ಕುರ್ನೂಲ್ ಜಿಲ್ಲೆಯ ಶ್ರೀಶೈಲಂನಲ್ಲಿರೋ ಮಲ್ಲಿಕಾರ್ಜನ ಸ್ವಾಮಿ ದೇವಾಲಯದಲ್ಲಿ ಭಕ್ತರ ತಲೆಗೂದಲಿಗೆ ಕಳ್ಳರು ಕನ್ನ ಹಾಕಿದ್ದಾರೆ. ಭಕ್ತರು ಅರ್ಪಿಸಿದ್ದ ಅಪಾರ ಪ್ರಮಾಣದ ತಲೆಗೂದಲನ್ನು ಹೊತ್ತೊಯ್ದಿದ್ದಾರೆ.

ದೇವಸ್ಥಾನದ ಕಿಟಿಕಿ ಮುರಿದು ಕಳ್ಳರು ಒಳಪ್ರವೇಶಿಸಿದ್ದಾರೆ, ಕಾಣಿಕೆ ಹುಂಡಿಯಲ್ಲಿದ್ದ ಕೂದಲನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಅದೇ ರೀತಿ ಇನ್ನೊಂದು ಹುಂಡಿಯನ್ನು ಒಡೆಯಲು ಪ್ರಯತ್ನಿಸಿ ಸಾಧ್ಯವಾಗದೇ ಹಾಗೇ ಬಿಟ್ಟು ಹೋಗಿದ್ದಾರೆ.

ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ಭಕ್ತರು ತಲೆಗೂದಲನ್ನು ಸಮರ್ಪಿಸುವ ಸಂಪ್ರದಾಯವಿದೆ. ಹೀಗೆ ಸಂಗ್ರಹವಾದ ಕೂದಲನ್ನು ವರ್ಷಕ್ಕೊಮ್ಮೆ ಹರಾಜು ಹಾಕಲಾಗುತ್ತದೆ. ಅತಿ ಹೆಚ್ಚು ಬಿಡ್ ಮಾಡಿದ ಗುತ್ತಿಗೆದಾರರು ಅದನ್ನು ಕೊಂಡುಕೊಳ್ಳಬಹುದು. ಕೂದಲಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಬೇಡಿಕೆ ಈರೋದ್ರಿಂದ ಕಳ್ಳರು ಕದ್ದೊಯ್ದಿದ್ದಾರೆ. ದೇವಸ್ಥಾನದಲ್ಲಿ ಕೂದಲು ಕಳ್ಳತನವಾದ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...